ಯೋಗದಿಂದ ರೋಗರುಜಿನಗಳಿಂದ ದೂರ ಇರಬಹುದು: ಅಗ್ನಿ
Yoga can keep you away from diseases: Agni
ಸಿಂದಗಿ 22: ಹಲವು ಶತಮಾನಗಳ ಹಿಂದೆಯೇ ಭಾರತದ ಋಷಿಮುನಿಗಳು ವಿಶ್ವಕ್ಕೆ ಯೋಗದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಆದರೆ ಇಂದಿನ ಯುವ ಪೀಳಿಗೆ ಆಧುನಿಕ ಜೀವನ ಶೈಲಿಯನ್ನು ಅಳವಡಿಸಿಕೊಂಡಿರುವುದರಿಂದ ಯೋಗದಿಂದ ದೂರ ಉಳಿಯುತ್ತಿದ್ದಾರೆ ಎಂದು ತಾಪಂ ಇಒ ರಾಮು ಅಗ್ನಿ ವಿಷಾದವ್ಯಕ್ತಪಡಿಸಿದರು.
ಸಿಂದಗಿ ತಾಲೂಕಿನ ಬಂದಾಳ ಗ್ರಾಪಂ ವ್ಯಾಪ್ತಿಯ ಓತಿಹಾಳ ಗ್ರಾಮದಲ್ಲಿರುವ ಅಮೃತ ಸರೋವರ ದಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವವನ್ನು ವಹಿಸಿಕೊಂಡು ಮಾತನಾಡಿದ ಅವರು, ಯೋಗದಿಂದ ವಿದ್ಯಾರ್ಥಿಗಳಿಗೆ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ. ದೈಹಿಕವಾಗಿ, ಮಾನಸಿಕವಾಗಿ ಸ್ಥೈರ್ಯ ಬರುವುದಲ್ಲದೇ ಅದರಿಂದ ಹಲವು ರೋಗರುಜಿನಗಳಿಂದ ದೂರ ಇರಬಹುದು ಎಂದು ತಿಳಿಸಿದರು.
ಪ್ರೌಢಶಾಲೆ ದೈಹಿಕ ಶಿಕ್ಷಕಿ ಸವಿತಾ ಇಂಗಳಗಿ ಅವರು ಹಠಸೂರ್ಯ ನಮಸ್ಕಾರ, ಅಯ್ಯಂಗಾರ್ ಸೂರ್ಯ ನಮಸ್ಕಾರ ಮತ್ತು ಅಷ್ಟಾಂಗ ಸೂರ್ಯ ನಮಸ್ಕಾರಗಳ ಉಪಯುಕ್ತ ಮಾಹಿತಿ ಮತ್ತು ಯೋಗಾಭ್ಯಾಸ ಮಾಡಿಸಿದರು.
ನರೇಗಾ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಗ್ರಾಪಂ ಅಧ್ಯಕ್ಷ ಯಮನಪ್ಪ ಹೊಸಮನಿ, ಐಇಸಿ ಸಂಯೋಕ ಭೀಮರಾಯ ಚೌಧರಿ, ಕಾರ್ಯದರ್ಶಿ ರಾಜಾಸಾಬ ಮುಜಾವರ, ರಾಜಶೇಖರ ಹಿರೇಕುರುಬರ, ರಾಜು ವಡ್ಡರ ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 