ಭಾರತ ವಿಶ್ವಕ್ಕೆ ನೀಡಿದ ಶ್ರೇಷ್ಠ ಕೊಡುಗೆ ಯೋಗ
Yoga is the greatest gift India has given to the world
ಲೋಕದರ್ಶನ ವರದಿ
ಇಂಡಿ 20: ತಾಲ್ಲೂಕಿನ ಚಿಕ್ಕಬೇವನೂರ ಎಚ್ ಪಿ ಎಸ್ ಶಾಲೆಯಲ್ಲಿ 12ನೇ ವಿಶ್ವಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗುರುಮಾತೆ ಎಸ್.ಕೆ.ಮಾವಿನಮರ ಅವರು ಮಕ್ಕಳಿಗೆ ಯೋಗವನ್ನು ಮಾಡಿಸಿ ನಂತರ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಯೋಗವು ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು, ಇದು ಮನುಷ್ಯನ ಮನಸ್ಸು, ದೇಹ, ಉಸಿರಾಟವನ್ನು ನಿಯಂತ್ರಿಸಿ, ಆಂತರಿಕ ಶಾಂತಿ ಕಾಪಾಡಲು ಸಹಕಾರಿಯಾಗಿದೆ. ಇಂದಿನ ವಿದ್ಯಾರ್ಥಿಗಳಲ್ಲಿ ಒತ್ತಡ-ಆತಂಕ ನಿವಾರಿಸಿ, ಏಕಾಗ್ರತೆ, ನೆನಪಿನ ಶಕ್ತಿಯನ್ನು ವೃದ್ಧಿಸಲು ಯೋಗವು ಪರಿಪೂರ್ಣ ಅಭ್ಯಾಸವಾಗಿದೆ. ಮನುಷ್ಯ ತನ್ನ ಜೀವನವನ್ನು ಯೋಗ ಜೀವನವನ್ನಾಗಿ ಬದಲಾಯಿಸಿಕೊಳ್ಳಬೇಕು. ಯೋಗವು ದೈಹಿಕ, ಮಾನಸಿಕ, ಆಧ್ಯಾತ್ಮಿಕ ಆರೋಗ್ಯವನ್ನು ಸಮತೋಲನದಲ್ಲಿಡುವ ಅದ್ಭುತ ಜೀವನ ಶೈಲಿಯಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ರವಿ ವಾಲಿಕಾರ, ಆರ್.ಎಂ.ಮುಜಾವರ, ಕೆ.ಆರ್.ಅವಟಿ, ಮುಖ್ಯ ಗುರು ಲಾಯಪ್ಪ ಮನಗೂಳಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 