ಯೋಗದಿಂದ ರೋಗ ದೂರ: ಪ್ರೊ. ಎಂ.ಎಸ್.ಖೊದ್ನಾಪೂರ
Yoga keeps diseases away said Prof. M.S. Khodnapur
ವಿಜಯಪುರ ೨೨: ಯೋಗವು ಕೇವಲ ಒಂದು ದೈಹಿಕ ವ್ಯಾಯಾಮವಲ್ಲ. ಅದು ಮನಸ್ಸು, ದೇಹ ಮತ್ತು ಉಸಿರಾಟಗಳ ನಡುವಿನ ಸಂಪರ್ಕದ ಸಾಧನವಾಗಿದೆ. ವ್ಯಕ್ತಿಯಲ್ಲಿರುವ ಚಿತ್ತದ ವೃತ್ತಿಗಳನ್ನು ನಿಯಂತ್ರಿಸುವುದಾಗಿದೆ. ಇದರಿಂದ ಜೀವನದಲ್ಲಿ ಶಿಸ್ತು, ಚೈತನ್ಯ, ಸಮತೋಲಿತ ಮತ್ತು ಸುಸ್ಥಿರ ಆರೋಗ್ಯಕ್ಕೆ ಸಹಕಾರಿ ಎಂದು ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಪ್ರಾಯಪಟ್ಟರು.
ಅವರು ನಗರದ ಅಥಣಿ ರಸ್ತೆಯಲ್ಲಿರುವ ಅಲ್-ಅಮೀನ್ ಆಸ್ಪತ್ರೆಯ ಎದುರಿಗೆ ಇರುವ ಎನ್.ಜಿ.ಓ. ಕಾಲನಿಯ ಆಂಜನೇಯ ದೇವಸ್ಥಾನದಲ್ಲಿ ದಿನಾಂಕ: ೨೧-೦೬-೨೦೨೬ ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ ಮತ್ತು ೭ ದಿನಗಳ ಯೋಗ ಶಿಬಿರದ ಉದ್ಘಾಟನೆಯಲ್ಲಿ ಅವರು ಮಾತನಾಡುತ್ತಿದ್ದರು.
ಅವರು ಮತನಾಡುತ್ತಾ, ಭಾರತವು ಭವ್ಯ ಪರಂಪರೆ-ಸAಸ್ಕೃತಿಯ ತವರೂರು. ಸಾಧು-ಸಂತ, ಋಷಿಮುನಿಗಳ ಭವ್ಯತೆ ನಾಡು. ಅಧ್ಯಾತ್ಮಕತೆಯ ಪುಣ್ಯಭೂಮಿ. ಪ್ರಾಚೀನ ಕಾಲದಲ್ಲಿ ನಮ್ಮ ದೇಶದ ಋಷಿ-ಮುನಿಗಳು, ಸಾಧು-ಸಂತರು ತಮ್ಮ ತಪಸ್ಸು, ಮನಃಶಾಂತಿ, ಭಕ್ತಿ ಮತ್ತು ಧ್ಯಾನದಲ್ಲಿ ಏಕಾಗ್ರತೆಯನ್ನು ತರಲು ಯೋಗ ಅವಶ್ಯಕ. ಯೋಗದ ಮೂಲಕ ಜಾಗತಿಕ ಐಕ್ಯತೆ ಮತ್ತು ಸಂಸ್ಕೃತಿಯ ಪರಿಚಯಿಸಿದ ಮತ್ತು ಇಡೀ ಜಗತ್ತಿಗೆ ಯೋಗದ ಮೂಲಕ ಅಧ್ಯಾತ್ಮಕತೆಯನ್ನು ಸಾರಿದ ನಾಡು ನಮ್ಮದು.. ಯೋಗ-ವ್ಯಾಯಾಮಗಳಂತಹ ನಮ್ಮ ದೇಶೀಯ ಸಂಸ್ಕೃತಿಯನ್ನು ರೂಢಿಸಿಕೊಂಡು ನಮ್ಮ ಮುಂದಿನ ಜನಾಂಗದ ಉತ್ತಮ ಆರೋಗ್ಯಕ್ಕೆ ಯೋಗದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿ ತನ್ಮೂಲಕ ಈ ಭವ್ಯ ಭಾರತವನ್ನು ಸ್ವಾಸ್ಥö್ಯ ಮತ್ತು ಆರೋಗ್ಯಯುತವನ್ನಾಗಿಸಲು ನಾವೆಲ್ಲ ಕಂಕಣಬದ್ಧರಾಗೋಣ ಎಂದು ಸಲಹೆ ನೀಡಿದರು.
ಯೋಗ ಶಿಕ್ಷಕಿ ಮಂಜುಳಾ ಜೋಶಿ ಅವರು ಮಹಿಳೆಯರಿಗೆ ಯೋಗಾಭ್ಯಾಸ ಶಿಬಿರದಲ್ಲಿ ಮಾತನಾಡುತ್ತಾ, ಯೋಗವು ಒತ್ತಡ, ಸಂಘರ್ಷ, ಆತಂಕ, ದುಗುಡ, ಖಿನ್ನತೆ, ನಿರ್ಲಿಪ್ತತೆ ಮತ್ತು ಮಾನಸಿಕ ಅಶಾಂತಿಯನ್ನು ಹೋಗಲಾಡಿಸಿ ಏಕಾಗ್ರತೆಯನ್ನು ಹೆಚ್ಚಿಸಲು ಪ್ರಯೋಜನಕಾರಿಯಾಗಿದೆ. ದೈನಂದಿನವಾಗಿ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಜೀವನಶೈಲಿ ಬೆಳೆಸಲು ಇದೊಂದು ಶಕ್ತಿಯುತವಾದ ಸಾಧನ. ಒಟ್ಟಾರೆ ದೈಹಿಕ ಕಸರತ್ತು, ವ್ಯಾಯಾಮ, ಧ್ಯಾನ, ಯೋಗ, ಇವೆಲ್ಲವೂ ವ್ಯಕ್ತಿಯ ಸುಸ್ಥಿರ ಆರೋಗ್ಯ ಮತ್ತು ಯೋಗಕ್ಷೇಮದೊಂದಿಗೆ ಬದುಕಲು ಸಹಾಯಕವಾಗಿವೆ. ನಮ್ಮ ಋಷಿ ಮುನಿಗಳ ಪ್ರಕಾರ, ಅಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ-ಸAಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನದ ಶಿಕ್ಷಣವೇ ಯೋಗ. ಕೇವಲ ಈ ದಿನಾಚರಣೆಯನ್ನು ಸಾಂಕೇತಿಕವಾಗಿ ಆಚರಿಸಿ, ಒಂದು ದಿನ ಯೋಗ ಮಾಡಿ, ಮೋಬೈಲ್ ನಲ್ಲಿ ಸ್ಟೇಟಸ್ ಇಟ್ಟು ಸಂಭ್ರಮಿಸಿದರೆ ಸಾಲದು. ಯೋಗವು ನಮ್ಮ ಪ್ರತಿನಿತ್ಯ ಜೀವನದಲ್ಲಿ ಅವಿಭಾಜ್ಯ ಅಂಗವಾಗಿಸಿಕೊAಡು ಆರೋಗ್ಯವನ್ನು ಕಾಪಾಡಿಕೊಳ್ಳುತ್ತಾ, ರಾಷ್ಟçದ ಸ್ವಾಸ್ಥö್ಯವನ್ನು ಸುಧಾರಿಸುವಂತಾಗಬೇಕು ಎಂದು ಹೇಳಿದರು.
ಈ ಯೋಗ ಶಿಬಿರದಲ್ಲಿ ಸುತ್ತಮುತ್ತಲಿನ ಕಾಲನಿಗಳ ಮಹಿಳೆಯರು, ಮಕ್ಕಳು ಸೇರಿದಂತೆ ೧೦೦ ಕ್ಕೂ ಹೆಚ್ಚು ಜನರು ಯೋಗ ಶಿಬಿರದಲ್ಲಿ ಪಾಲ್ಗೊಂಡಿದ್ದರು..
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 