ಯೋಗದಿಂದ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡಲಿವೆ: ಜಿಲ್ಲಾಧಿಕಾರಿ
Yoga will instill positive thoughts in the mind: District Collector
ಲೋಕದರ್ಶನ ವರದಿ
ಕಾರವಾರ 21:- ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಬೆಳೆದಂತೆ ದೈಹಿಕ ಶ್ರಮ ಕಡಿಮೆಯಾಗಿದ್ದು, ಆರೋಗ್ಯದ ಕಡೆಗೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಆಧುನಿಕ ಜೀವನಶೈಲಿಯಿಂದಾಗಿ ಸಣ್ಣ ಮಕ್ಕಳಲ್ಲೂ ಸಹ ತೀವ್ರ ಒತ್ತಡ, ಖಿನ್ನತೆ ಹಾಗೂ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆಯಂತಹ ನಕಾರಾತ್ಮಕ ಪ್ರವೃತ್ತಿಗಳು ಕಂಡುಬರುತ್ತಿದ್ದ್ದು, ಪ್ರತಿದಿನ ಯೋಗ ಅಭ್ಯಾಸ ಮಾಡುವುದರಿಂದ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡಲಿವೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದರು.
ಅವರು ಭಾನುವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರ ಸಭೆ, ಕಾರವಾರ, ಎನ್.ಸಿ.ಸಿ, ಎನ್.ಎಸ್.ಎಸ್, ರೆಡ್ ಕ್ರಾಸ್, ಪತಂಜಲಿ, ರೋಟರಿ ಕ್ಲಬ್, ರೋಟರಿ ಸಿಸೈಡ್, ರೋಟರಿ ಪಶ್ಚಿಮ, ಆರೋಗ್ಯ ಭಾರತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮ ಹಿರಿಯರು ಪ್ರತಿದಿನ ದೈಹಿಕ ಶ್ರಮದ ಚಟುವಟಿಕೆಗಳನ್ನು ಮಾಡುತ್ತಿದ್ದರಿಂದ ಸಹಜವಾಗಿ ಅವರಲ್ಲಿ ಆರೋಗ್ಯ ವೃದ್ದಿಯಾಗಿತ್ತು, ಆದರೆ ಪ್ರಸ್ತುತ ಆಧುನಿಕ ಜೀವನ ಶೈಲಿಯಿಂದಾಗಿ ದೈಹಿಕ ಶ್ರಮದ ಚಟುವಟಿಕೆಗಳು ಕಡಿಮೆಯಾಗಿದ್ದು, ಮಾನಸಿಕ ಒತ್ತಡ ಅಧಿಕವಾಗಿದೆ. ಯೋಗ ಮತ್ತು ಕ್ರೀಡೆಯಿಂದಾಗಿ ಒತ್ತಡ ರಹಿತ ಆರೋಗ್ಯ ಪೂರ್ಣ ಜೀವನ ನೆಡೆಸಲು ಸಾಧ್ಯವಾಗಲಿದ್ದು, ಇದಕ್ಕಾಗಿ ಪ್ರತಿದಿನ ನಮಗಾಗಿಯೇ ಸಮಯವನ್ನು ಮೀಸಲಿಟ್ಟುಕೊಂಡು ಅಭ್ಯಾಸ ಮಾಡಬೇಕು. ಯೋಗವು ನಮ್ಮ ದೇಶವು ಇಡೀ ಜಗತ್ತಿಗೆ ನೀಡಿರುವ ಅತ್ಯಂತ ಅಮೂಲ್ಯವಾದ ಮತ್ತು ಮಹತ್ತರವಾದ ಜಾಗತಿಕ ಕೊಡುಗೆಯಾಗಿದೆ ಎಂದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 