ಯುವ ಕವಿ ಗೋಷ್ಠಿ ಯಶಸ್ವಿ
Young Poets' Session a Success
ತಾಳಿಕೋಟಿ 17: ಪಟ್ಟಣದ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯ, ತಾಳಿಕೋಟಿಯ ಐ.ಕ್ಯೂ.ಎಸ್.ಸಿ. ಘಟಕದ ಆಶ್ರಯದಲ್ಲಿ ಯುವ ಕವಿ ಗೋಷ್ಠಿ ಕಾರ್ಯಕ್ರಮವು ಗುರುವಾರ ಯಶಸ್ವಿಯಾಗಿ ನಡೆಯಿತು. ಮತ್ತು ಅಂಬೆಗಾಲಿನ ಬರಹಗಳು ಪ್ರಶಿಕ್ಷಣಾರ್ಥಿಗಳು ರಚಿತ ಕವನ ಸಂಕಲನ ಬಿಡುಗಡೆ ಮಾಡಲಾಯಿತು.
ಅಧ್ಯಕ್ಷತೆಯನ್ನು ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಆರ್. ಎಂ. ಬಂಟನೂರ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ, ಸೃಜನಶೀಲತೆ ಹಾಗೂ ಭಾಷಾ ಕೌಶಲ್ಯವನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾಹಿತಿ, ಕವಿ ಹಾಗೂ ಸಹಶಿಕ್ಷಕ ವಿದ್ಯಾಕುಮಾರ್ ಅವರು ಯುವ ಕವಿಗಳಿಗೆ ಸಾಹಿತ್ಯದ ಮಹತ್ವವನ್ನು ತಿಳಿಸಿ, ನಿರಂತರ ಓದು ಮತ್ತು ಬರವಣಿಗೆಯ ಮೂಲಕ ಉತ್ತಮ ಸಾಹಿತ್ಯ ಸೃಷ್ಟಿಸಬೇಕೆಂದು ಕರೆ ನೀಡಿದರು.
ಉಪನ್ಯಾಸಕವೈ. ಎಚ್. ಅಂಗಡಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾವಿದ್ಯಾಲಯದ ಉಪನ್ಯಾಸಕರು ಹಾಗೂ ಬಿ.ಎಡ್. ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು. ಪ್ರಶಿಕ್ಷಣಾರ್ಥಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸುವ ಮೂಲಕ ಸಾಹಿತ್ಯಾಸಕ್ತಿಯನ್ನು ವ್ಯಕ್ತಪಡಿಸಿದರು. ಪ್ರಶಿಕ್ಷಣಾರ್ಥಿಗಳಾದ ರೂಪಾ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ದೀಪಿಕಾ ನಿರೂಪಿಸಿದರು. ಐಶ್ವರ್ಯ ವಂದಿಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 