ಯುವನಿಧಿ ಯೋಜನೆ : ತಿಳುವಳಿಕೆ ಕಾರ್ಯಕ್ರಮ
Youth Fund Scheme: Awareness Program
ಕಾರವಾರ, ಆ.16 :- ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಇಲಾಖೆ, ಬೆಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ಯೋಜನಾ ಉದ್ಯೋಗ ವಿನಿಮಯ ಕಚೇರಿ ಕಾರವಾರ, ಪಂಚ ಗ್ಯಾರಂಟಿ ಪ್ರಾಧಿಕಾರದ ಹಳಿಯಾಳ ತಾಲೂಕು, ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಳಿಯಾಳ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.13 ರಂದು ಯುವನಿಧಿ ಯೋಜನೆಯ ಹಾಗೂ ಯುವನಿಧಿ ಪ್ಲಸ್ ಯೋಜನೆಗೆ ಸಂಬಂಧಪಟ್ಟಂತೆ ಒಂದು ದಿನದ ತಿಳುವಳಿಕೆ ಕಾರ್ಯಕ್ರಮವನ್ನು ಹಳಿಯಾಳದ ಹವಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.
ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಸುಭಾಸ್ ಕೊರ್ವೇಕರ ಅಧ್ಯಕ್ಷತೆ ವಹಿಸ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಯಾದ ಯುವನಿಧಿಯನ್ನು ವಿದ್ಯಾರ್ಥಿಗಳು ಸದುಪಯೋಗಿಸಿಕೊಂಡು , ಯೋಜನೆಯಿಂದ ಪಡೆದ ಹಣವನ್ನು ತಮ್ಮ ಮುಂದಿನ ಉಜ್ವಲ ಭವಿಷ್ಯಕ್ಕೆ ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದರು.
ಪಂಚ ಗ್ಯಾರಂಟಿ ಪ್ರಾಧಿಕಾರ ತಾಲೂಕು ಅಧ್ಯಕ್ಷ ಕುಮಾರ ಏಕನಾಥ ಜಾವಳೇಕರ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ಯಾರಂಟಿ ಯೋಜನೆಯ ಅನುಷ್ಠಾನದ ಕುರಿತು ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ವಿದ್ಯಾರ್ಥಿಗಳು ಸರ್ಕಾರದ ಯೋಜನೆಯ ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು.
ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ, ಕೇಂದ್ರದ (ಸೀಡಾಕ್ ಮಂಗಳೂರು) ಉಪನಿರ್ದೇಶಕ ಶಿವಾನಂದ ಯಲಗಾರ್ ಮಾತನಾಡಿ ಯುವನಿಧಿ ಪ್ಲಸ್ ಯೋಜನೆಯ ಬಗ್ಗೆ ವಿವರಿಸುತ್ತಾ ಕೌಶಲ್ಯದ ಮಹತ್ವ. ಕೌಶಲ್ಯ ಬೆಳೆದು ಬಂದ ದಾರಿ, ಕೌಶಲ್ಯವನ್ನು ನಮ್ಮ ಜೀವನದಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕು ಹಾಗೂ ಆ ಕೌಶಲ್ಯದ ಮುಖಾಂತರ ನಮ್ಮ ಜೀವನವನ್ನು ಯಾವ ರೀತಿ ರೂಪಿಸಿಕೊಳ್ಳಬೇಕೆಂದು ಯುವನಿಧಿ ಫಲಾನುಭವಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಕಾರವಾರದ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ (ಪ್ರಭಾರಿ) ಗಡ್ಡೆಪ್ಪ ಕೊರಸಗಾವ್ ಅವರು ಯುವನಿಧಿ ಯೋಜನೆಯನ್ನು ಪಡೆದುಕೊಂಡ ಅಭ್ಯರ್ಥಿಗಳ ಅಂಕಿ-ಅಂಶಗಳ ಮಾಹಿತಿ ನೀಡಿದರು.
ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಜಾಬ್ ಡೆವಲಪಮೆಂಟ್ ಎಕ್ಸಿಕ್ಯೂಟಿವ್ ಸಾಯಿಪ್ರಸಾದ ಉಲ್ಲಾಸ ಸಾತರಕರೆ ಅವರು ಯುವನಿಧಿಗೆ ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಹಾಗೂ ಯಾರು ಈ ಅರ್ಜಿಯನ್ನು ಸಲ್ಲಿಸಲು ಅರ್ಹರು ಎಂದು ಇದರ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಹಳಿಯಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ರಂಜನಾ ಭಂಡಾರೆ, ಡಾ.ಪರಮಾನಂದ ದಾಸರ, ಡಾ. ಪ್ರತಾಪ ಕುಲಕರ್ಣಿ, ಪ್ರೋಫೆಸರ್ ಲಕ್ಷ್ಮಣ ಕಾಳೆ, ಯುವನಿಧಿ ಫಲಾನುಭವಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಡಾ. ವೈ.ಐ. ಚವ್ಹಾನ್ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಗಂಗಾಧರ ಡಿ. ನಿರೂಪಿಸಿದರು. ಭಾರತಿ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 