ಯುವ ಸಂಸತ್ ಸ್ಪರ್ಧೆ:5 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮುಂಡಗೋಡ:ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ತಾಲೂಕಾ ಪಂಚಾಯತ ಕಾರ್ಯಾಲಯ ಇವರ ಸಹಯೋಗದಲ್ಲಿ ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಶನಿವಾರ ತಾಲೂಕಾ ಮಟ್ಟದ ಯುವ ಸಂಸತ್ ಸ್ಪರ್ಧೆ ಆಯೋಜಿಸಲಾಗಿತ್ತು.
ತಾಲೂಕಿನ 10 ಪ್ರೌಢಶಾಲೆಗಳ ಒಟ್ಟು 50 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ಸಾಹದಿಂದ ಅಣುಕು ಸಂಸತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಉತ್ತಮ ವಾಕ್ ಚಾತುರ್ಯ, ಸೂಕ್ಷ್ಮತೆ, ಧೈರ್ಯ ವಿಷಯ ಮಂಡಿಸಿದ 5 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಪ್ರೌಢಶಾಲಾ ವಿಭಾಗದ ಶಿಕ್ಷಣ ಸಂಯೋಜಕ ಪಾಂಡುರಂಗ ಟಿಕ್ಕೋಜಿ ಸ್ವಾಗತಿಸಿದರು. ದಯಾನಂದ ನಾಯ್ಕ ಯುವ ಸಂಸತ್ ರಚನೆ, ಉದ್ದೇಶ, ರೂಪುರೇಷೆ, ಮಹತ್ವದ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು. ಸಿದ್ದಾರೂಢ ಸಾಬಾನಿ, ಶಿವಕುಮಾರ, ಗೀತಾ ದೇವಳಿ, ಗಿರಿಜಾ ದೇವಾಡಿಗ, ವಿದ್ಯಾ ಪಾಠಣಕರ ನಿರ್ಣಾಯಕರಾಗಿ ಆಗಮಿಸಿದ್ದರು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಆರ್.ಗಾಣಿಗೇರ ಮಾರ್ಗದರ್ಶನದಲ್ಲಿ ಸ್ಪರ್ಧೆ ಜರುಗಿತು.
ಯುವ ಸಂಸತ್ ಸ್ಪರ್ಧೆಯಲ್ಲಿ ಪಟ್ಟಣದ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಮರೆಮ್ಮನವರ ಪ್ರಥಮ, ಹುನಗುಂದ ಸರ್ಕಾರಿ ಪ್ರೌಢಶಾಲೆಯ ಪುಷ್ಪಾ ಹಳಕಟ್ಟಿ ದ್ವಿತೀಯ, ಚಿಗಳ್ಳಿ ಸರ್ಕಾರಿ ಪ್ರೌಢಶಾಲೆಯ ಲಕ್ಷ್ಮೀ ಉಪ್ಪಾರ ತೃತೀಯ, ಮಳಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಮಾನ್ಯಾ ನಾಯ್ಕ ಚತುರ್ಥ ಮತ್ತು ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜ್ನ ವಿದ್ಯಾರ್ಥಿ ಶಿವಲಿಂಗಯ್ಯ ಎಸ್.ಪಿ. ಪಂಚಮ ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.