ಪ್ರಜಾಪ್ರಭುತ್ವ ಮೌಲ್ಯ ವರ್ಧನೆಗೆ ಯುವ ಸಂಸತ್ತು"
ಲೋಕದರ್ಶನ ವರದಿ
ಹೂವಿನಹಡಗಲಿ ಅ.29: ’ದೇಶದ ಸಂವಿಧಾನ,ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಲು ಯುವ ಸಹಕಾರಿಯಾಗಿದೆ’ ಎಂದು ಸರ್ಕಾರಿ ಸಹಾಯಕ ಅಭಿಯೋಜಕ ಕೆ.ಅಜ್ಜಯ್ಯ ಹೇಳಿದರು.ಇಲ್ಲಿನ ಜೆಎಸ್ಎಸ್ ಪಬ್ಲಿಕ್ ಶಾಲೆಯಲ್ಲಿ ತಾಲ್ಲೂಕು ಆಡಳಿತ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಯುವ ಸಂಸತ್ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಕೊಟ್ರಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸಂವಿಧಾನದ ಮೌಲ್ಯ,ಸಾರ್ವಜನಿಕ ಸಮಸ್ಯೆಗಳನ್ನು ವಿಶ್ಲೇಷಿಸುವ ಸಾಮರ್ಥ್ಯ ಬೆಳೆಸಲು ಈ ಕಾರ್ಯಕ್ರಮ ಉಪಯುಕ್ತವಾಗಿದೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಂಗಳಾ, ಕಲ್ಯಾಣಾಧಿಕಾರಿ ಸಮಾಜ ಜ್ಯೋತಿ, ವಕೀಲರ ಸಂಘದ ಅಧ್ಯಕ್ಷ ಮಂಜುನಾಥ ಜೈನ್, ವಕೀಲರಾದ ಅಟವಾಳಗಿ ಕೊಟ್ರೇಶ, ಹನುಮಂತಪ್ಪ ಮಾತನಾಡಿದರು.
ಬಿಎಡ್ ಕಾಲೇಜು ಪ್ರಾಚಾರ್ಯ ರಮೇಶ, ಉಪ ತಹಶೀಲ್ದಾರ್ ಮಲ್ಲಿಕಾರ್ಜುನ, ತಾ.ಪಂ ಸಹಾಯಕ ನಿರ್ದೇಶಕ ಹೇಮಾದ್ರಿನಾಯ್ಕ ಇದ್ದರು.ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಯುವ ಸಂಸತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿ, ತಾಲ್ಲೂಕಿನ ಮೂಲಸೌಕರ್ಯ ಅಭಿವೃದ್ಧಿ, ಶೈಕ್ಷಣಿಕ ಸಮಸ್ಯೆಗಳನ್ನು ಪ್ರಸ್ತಾಪಿಸಿದರು.