ಯುವಜನರು ಹಕ್ಕುಗಳಿಗಾಗಿ ಒಂದಾಗಬೇಕು: ಬಸವರಾಜ ಪೂಜಾರ
Youth must unite for their rights: Basavaraja Pujara
ಯುವಜನರು ಹಕ್ಕುಗಳಿಗಾಗಿ ಒಂದಾಗಬೇಕು: ಬಸವರಾಜ ಪೂಜಾರ
ಹಾವೇರಿ 12: ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕು ಹಾಗೂ ಘನತೆಯ ಬದುಕಿಗಾಗಿ ಯುವಜನರು ಒಂದಾಗಿ ಹೋರಾಟ ನಡೆಸಬೇಕು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಕರೆ ನೀಡಿದರು.
ನಗರದ ಪರೀವೀಕ್ಷಣಾ ಮಂದಿರದ ಸಭಾಂಗಣದಲ್ಲಿ ಶನಿವಾರ ನಡೆದ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಹಾವೇರಿ ಜಿಲ್ಲಾ ಯುವಜನರ ಪ್ರಥಮ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ದೇಶ ಸ್ವತಂತ್ರಗೊಂಡು ಹಲವು ದಶಕಗಳು ಕಳೆದರೂ ಯುವಜನರಿಗೆ ಸಮರ್ಕ ಶಿಕ್ಷಣ, ಉದ್ಯೋಗ ಹಾಗೂ ಆರೋಗ್ಯದ ಹಕ್ಕುಗಳು ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಹಲವು ವರ್ಷಗಳ ಆಡಳಿತದ ಬಳಿಕವೂ ನೀರೀಕ್ಷಿತ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.
ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ರಾಜಕೀಯ ಮಾಡುವ ಮೂಲಕ ಜನರ ಐಕ್ಯತೆ ಒಡೆಯುವ ಪ್ರಯತ್ನ ನಡೆಯುತ್ತಿದೆ. ಅಗ್ನಿಪಥದಂತಹ ಗುತ್ತಿಗೆ ಆಧಾರಿತ ನೇಮಕಾತಿ ವ್ಯವಸ್ಥೆ ಯುವಜನರ ಭವಿಷ್ಯಕ್ಕೆ ಹಿನ್ನಡೆಯಾಗಿದೆ ಎಂದರು.
ರಾಜ್ಯ ಸರ್ಕಾರವೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಫಲವಾಗಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡುತ್ತಿದೆ ಎಂದು ಆರೋಪಿಸಿದರು.
ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯೆ ರೇಣುಕಾ ಕಹಾರ ಮಾತನಾಡಿ, ಯುವಜನರು ಒಗ್ಗಟ್ಟಾಗಿ ಹೋರಾಟ ನಡೆಸಿದರೆ ಬದಲಾವಣೆ ಸಾಧ್ಯ. ಅನ್ಯಾಯವನ್ನು ಪ್ರಶ್ನಿಸುವ ಧೈರ್ಯವನ್ನು ಯುವಜನರು ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಡಿವೈಎಫ್ಐ ಸಂಚಾಲಕ ನಾರಾಯಣ ಕಾಳೆ ಮಾತನಾಡಿ, ನಿರುದ್ಯೋಗದ ವಿರುದ್ಧ ಯುವಜನರು ಸಂಘಟಿತರಾಗಬೇಕು. ಜಿಲ್ಲೆಯಲ್ಲಿ ಸ್ಥಳೀಯ ಉದ್ಯೋಗಗಳನ್ನು ಸೃಷ್ಟಿಸುವುದರ ಜೊತೆಗೆ ಎಲ್ಲ ಇಲಾಖೆಗಳ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಸಮ್ಮೇಳನಕ್ಕೆ ಸಿಐಟಿಯು ಜಿಲ್ಲಾ ಸಂಚಾಲಕ ಅಂದಾನೆಪ್ಪ ಹೆಬಸೂರು, ಡಿಎಚ್ಎಸ್ ಮುಖಂಡ ವೀರಣ್ಣ ಗಡ್ಡಿಯವರ, ಈದಿನ ಮಾಧ್ಯಮದ ಶರಣು ಸಂಗನಹಾಳ, ಡಿವೈಎಫ್ಐ ಜಿಲ್ಲಾ ಮುಖಂಡ ಖಲಂದರ್ ಅಲ್ಲಿಗೌಡ್ರ ಶುಭಕೋರಿದರು. ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ತಸ್ಲೀಮಾ ಕೆ.ಸಿ. ನಿರೂಪಿಸಿದರು.
ಎಸ್ಎಫ್ಐ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ನಗವತ, ಜಿಲ್ಲಾ ಕಾರ್ಯದರ್ಶಿ ಚೈತ್ರಾ ಕೊರವರ, ಸಹ ಕಾರ್ಯದರ್ಶಿ ಶಂಭುಲಿಂಗ ಸವದತ್ತಿ, ಡಿವೈಎಫ್ಐ ಮುಖಂಡರಾದ ವಿಠ್ಠಲ ಗೌಳಿ, ನೀಲಪ್ಪ ಹರಜನ, ಸುನಿಲ್ ಕುಮಾರ್ ಎಲ್., ನಾಗರಾಜ ಕುರಬಗೊಂಡ, ದೃಶ್ಯ ಕನವಳ್ಳಿ, ಮಂಜುಳಾ, ಮೌಲನಿ ನವಲಗುಂದ, ಸಚಿನ್ ಬೂದಿಹಾಳ, ಹನುಮಂತಗೌಡ, ನಿಂಗರಾಜ ಪೂಜಾರ, ಮಾಬೂಲಿ ಕರ್ಜಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 