ಸಾಮಾಜಿಕ ಜಾಲತಾಣಗಳ ಸುಳಿಗೆ ಯುವಜನತೆ ಬೀಳದಿರಿ: ಭಾರತಿ ಪಾಟೀಲ
Youth should not fall into the trap of social media: Bharati Patil
ತಾಳಿಕೋಟಿ 06: ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಯುವಜನತೆ ದಾರಿ ತಪ್ಪುತ್ತಿದ್ದು, ಬದುಕಿನಲ್ಲಿ ಕೈಗೊಳ್ಳುವ ತಪ್ಪು ನಿರ್ಧಾರಗಳು ಜೀವನವನ್ನೇ ಸಂಕಷ್ಟಕ್ಕೆ ಸಿಲುಕಿಸಬಹುದು. ಆದ್ದರಿಂದ ಯುವಕ-ಯುವತಿಯರು ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ವಿಜಯಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಿಷನ್ ಸಂಯೋಜಕಿ ಭಾರತಿ ಪಾಟೀಲ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಆದರ್ಶ ಪ್ರಥಮ ದರ್ಜೆ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯ ದುಷ್ಪರಿಣಾಮಗಳ ಕುರಿತು ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅತಿಯಾದ ಮೊಬೈಲ್ ಬಳಕೆಯಿಂದ ಯುವಜನತೆ ತಮ್ಮ ಜೀವನದ ಗುರಿ ಮರೆತು ಸಾಮಾಜಿಕ ಜಾಲತಾಣಗಳ ಬಲೆಗೆ ಬೀಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಮೋಸ, ವಂಚನೆ ಹಾಗೂ ಬಾಹ್ಯ ಪ್ರಲೋಭನೆಗಳಿಗೆ ಒಳಗಾಗದೆ, ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಬೇಟಿ ಪಢಾವೋ, ಬಾಲ್ಯವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯಿದೆ ಸೇರಿದಂತೆ ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸಬೇಕು ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 