ಯುವಕರು ವ್ಯಸನಗಳಿಂದ ದೂರವಿದ್ದು, ನೆಮ್ಮದಿಯ ಜೀವನ ನಡೆಸಿ: ಡಾ. ಚಂದ್ರಶೇಖರ ಹಳಿಂಗಳೆ
ಕಾಗವಾಡ 25: ಇಂದಿನ ಯುವ ಜನತೆ ವ್ಯಸನಗಳಿಗೆ ದಾಸರಾಗಿ ಶಾರೀರಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಯುವಕರು ವ್ಯಸನಗಳಿಂದ ದೂರವಿದ್ದು, ನೆಮ್ಮದಿಯ ಜೀವನ ತಮ್ಮದಾಗಿಸಿಕೊಳ್ಳಬೇಕೆಂದು ಮಿರಜ್‌ನ ನಿರ್ಮಲ ಆಸ್ಪತ್ರೆ ಮತ್ತು ವ್ಯಸನಮುಕ್ತಿ ಕೇಂದ್ರದ ಸಂಸ್ಥಾಪಕ ಡಾ. ಚಂದ್ರಶೇಖರ ಹಳಿಂಗಳೆ ಹೇಳಿದ್ದಾರೆ.
ಅವರು ಇತ್ತಿಚಿಗೆ ಸಾಂಗಲಿ ಜಿಲ್ಲೆಯ ಮಿರಜ ತಾಲೂಕಿನ ಟಾಕಳಿ-ಬೋಲವಾಡದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಗುರುದೇವ ತಪೋವನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮಾರ್ಗಶಿರ ಪೊರ್ಣಿಮೆಯಂದು ಹಮ್ಮಿಕೊಂಡಿದ್ದ ಯುವಕರಲ್ಲಿ ವ್ಯಸನಮುಕ್ತಿ ಮತ್ತು ನೆಮ್ಮದಿಯ ಜೀವನದ ಕುರಿತು ನಡೆದ ಉಪನ್ಯಾಸದಲ್ಲಿ ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಡಾ. ಚಂದ್ರೇಶಖರ ಹಳಿಂಗಳೆ, ಡಾ. ನಿಶಾ ಹಳಿಂಗಳೆ, ಮತ್ತು ನಿರ್ಮಲಾ ಹಳಿಂಗಳೆ ಇವರನ್ನು ಆಶ್ರಮದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಚಂದ್ರಶೇಖರಹಳಿಂಗಳೆ, ಡಾ. ನಿಶಾ ಹಳಿಂಗಳೆ ಮತ್ತು ನಿರ್ಮಲ ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಗುರುದೇವ ತಪೋವನದ ಪ.ಪೂ. ಶಿವದೇವ ಶ್ರೀಗಳು, ತಪೋವನದ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 