ವಿವಿಧ ಕಾಮಗಾರಿಗಳ ಸ್ಥಳಗಳಿಗೆ ಜಿ.ಪಂ.ಸಿಇಓ ರಾಹುಲ್ ಶಿಂಧೆ ಭೇಟಿ-ಪರಿಶೀಲನೆ
ಇಂಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕಾಮಗಾರಿಗಳಿಗೆ ಜಿ.ಪಂ.ಸಿಇಓ ರಾಹುಲ್ ಶಿಂಧೆ ಭೇಟಿ-ಪರಿಶೀಲನೆ
ವಿಜಯಪುರ ನ.03 : ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಗುರುವಾರ ಇಂಡಿ ತಾಲೂಕಿನ ಹೊರ್ತಿ, ಕೊಳುರಗಿ, ಬಬಲಾದ ಮತ್ತು ಕಪನಿಂಬರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಳುರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸಾವಳಸಂಗ ಗ್ರಾಮದ ಅರಣ್ಯ ಇಲಾಖೆ ಮತ್ತು ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ, ಸಸಿ ನೆಟ್ಟಿರುವ ಕಾಮಗಾರಿಗಳ ವೀಕ್ಷಣೆ ನಡೆಸಿ ಪರಿಶೀಲಿಸಿದರು.
ಹೊರ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆಯ ಸೌಲಭ್ಯಗಳ ಕುರಿತು ಅಲ್ಲಿನ ಸಿಬ್ಬಂದಿಯೊAದಿಗೆ ಚರ್ಚೆ ನಡೆಸಿ, ಹಾಜರಾತಿ ಪರಿಶೀಲಿಸಿದರು. ದಿನದ 24ಗಂಟೆಯು ಆರೋಗ್ಯ ಸೇವೆ ಹೊಂದಿರುವ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರು ಕರ್ತವ್ಯದಲ್ಲಿರಬೇಕೆಂದು ಸೂಚನೆ ನೀಡಿ, ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಯ ವಿವಿಧ ಕೊಠಡಿಗಳನ್ನು ವೀಕ್ಷಿಸಿದ ಅವರು, ಕಪನಿಂಬರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗುಂದವನ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ, ರಾಷ್ಟೀಯ ಹೆದ್ದಾರಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಶಾಲಾ ಕಟ್ಟಡ ಸ್ಥಳಾಂತರಕ್ಕೆ ತುರ್ತು ಕ್ರಮ ಕೈಗೊಂಡು ಟೆಂಡರ್ ಕರೆದು, ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಗುಣಮಟ್ಟದಿಂದ ಕೂಡಿದ ಶಾಲಾ ಕಟ್ಟಡ ನಿರ್ಮಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಚಿದಾನಂದ ಮಿಂಚನಾಳ ಅವರಿಗೆ ಸೂಚಿಸಿದರು. ಶಾಲೆಯ ಮುಖ್ಯ ಶಿಕ್ಷಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸಲಹೆ ನೀಡಿದರು.
ಬಬಲಾದ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಡಿ ಸಸ್ಯಪಾಲನಾ ಕ್ಷೇತ್ರಕ್ಕೆ ಭೇಟಿ ನೀಡಿ ಸಸಿಗಳನ್ನು ವೀಕ್ಷಿಸಿದರು. ಬಬಲಾದ ಗ್ರಾಮ ಪಂಚಾಯಿತಿಯ ಹೊಸ ಕಟ್ಟಡ ಹಾಗೂ ಇಂಡಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ನೆಡಲಾದ ವಿವಿಧ ಬಗೆಯ ಸಸಿಗಳನ್ನು ವೀಕ್ಷಿಸಿದರು.
ಇಂಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಆವರಣ ಸ್ವಚ್ಛತೆ ಇಲ್ಲದೆ ಇರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಗ್ರೂಪ್ ‘ಡಿ’ ಸಿಬ್ಬಂದಿಯವರೊAದಿಗೆ ಚರ್ಚೆ ನಡೆಸಿ, 7 ದಿನಗಳಲ್ಲಿ ಸ್ವಚ್ಛತೆ ಕಾರ್ಯ ಪೂರ್ಣಗೊಳ್ಳದಿದ್ದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದರು. ಈ ಕುರಿತು ಪರಿಶೀಲಿಸಿ ಅನುಪಾಲನ ವರದಿ ನೀಡುವಂತೆ ಇಂಡಿ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ ಅವರಿಗೆ ಸೂಚಿಸಿದರು. ಜಿಲ್ಲಾ ಪಂಚಾಯತಿ ಅನುದಾನದಲ್ಲಿ ಕೆಆರ್ಐಡಿಎಲ್ ಅನುಷ್ಠಾನ ಇಲಾಖೆಯಡಿ ನಿರ್ಮಾಣಗೊಂಡ ಚಿಕ್ಕಮಕ್ಕಳ ವಾರ್ಡ್, ಹೊಸ ಕಟ್ಟಡವನ್ನು ಈ ಸಂದರ್ಭದಲ್ಲಿ ವೀಕ್ಷಿಸಿದರು.
ಇಂಡಿ ತಾಲೂಕು ಕಚೇರಿ ಸಭಾಂಗಣದಲ್ಲಿ ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಹಾಯಕರು ಸಭೆ ನಡೆಸಿದ ಅವರು, ತೋಟಗಾರಿಕೆ ಇಲಾಖೆಯಡಿ ತಾಲೂಕಿನಲ್ಲಿ ಕೈಗೊಂಡಿರುವ ವಿವಿಧ ಬೆಳೆಗಳ ಪ್ರಗತಿ ಕುರಿತು ಚರ್ಚಿಸಿ, ಮಾವು ಬೆಳೆಗೆ ಪ್ರೋತ್ಸಾಹಿಸಲು ತಿಳಿಸಿದರು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನರ್ಸರಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನ ಮಾಡುತ್ತಿರುವ ಗ್ರಾಮ ಪಂಚಾಯತಿಗಳ ಪ್ರಗತಿ ಚರ್ಚಿಸಿದರು. ರೇಷ್ಮೆ ಇಲಾಖೆಯಡಿ ಮಾವಿನಹಳ್ಳಿ ಗ್ರಾಮದಲ್ಲಿನ ರೇಷ್ಮೆ ನರ್ಸರಿ ಪ್ರಗತಿ ಮಾಹಿತಿ ಕುರಿತು ಚರ್ಚಿಸಿ ಸೂಕ್ತ ನೀರಿನ ಸೌಲಭ್ಯ ಒದಗಿಸುವಂತೆ ಸೂಚಿಸಿದರು. ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ 200ಕ್ಕೂ ಹೆಚ್ಚು ಮಕ್ಕಳು ಉತ್ತಮ ಆರೋಗ್ಯ ಸೇವೆ ಪಡೆದಿದ್ದಾರೆ ಇದು ಉತ್ತಮ ಬೆಳವಣಿಗೆ ಎಂದು ಪ್ರಶಂಸಿದರು.
ಜಾನುವಾರುಗಳಿಗೆ ಲಸಿಕೆ ಹಾಕುವ ಕೆಲಸ ತುರ್ತಾಗಿ ಪೂರ್ಣಗೊಳಿಸಬೇಕು ಗ್ರಾಮ, ಪಂಚಾಯತಿ ವ್ಯಾಪ್ತಿಯಲ್ಲಿ ಫಾಗಿಂಗ್ ಪ್ರಥಮಾದ್ಯತೆ ಮೇರೆಗೆ ಪಾಗಿಂಗ್ ಕಾರ್ಯ ಪೂರ್ಣಗೊಳಿಸಬೇಕು. ಡೆಂಗ್ಯೂ ಕಾಯಿಲೆ ಕುರಿತಾಗಿ ಜಾಗೃತಿ ಮೂಡಿಸಬೇಕು ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿಗಳನ್ನು ಸೂಕ್ತ ಸಮಯದಲ್ಲಿ ಪೂರ್ಣ ಮಾಡಬೇಕು, ನರೇಗಾ ಯೋಜನೆ ಅಡಿ ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ಹಿಂದೆ ಉಳಿದ ಗ್ರಾಮ ಪಂಚಾಯಿತಿಯ ಅಭಿವೃಧ್ದಿ ಅಧಿಕಾರಿಗಳಿಗೆ ಕಾರಣ ಕೇಳಿ, ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು. ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಕಲುಷಿತ ನೀರು ಪೂರೈಕೆಯಾಗಿ ಆರೋಗ್ಯದಲ್ಲಿ ವ್ಯತ್ಯಾಸ ಆಗದಂತೆ ಸೂಕ್ತ ಕ್ರಮ ವಹಿಸಬೇಕೆಂದು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುನೀಲ ಮದ್ದಿನ ಸೇರಿದಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಇಂಡಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ, ಇಂಡಿ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರಾ.ಉ) ಸಂಜಯ ಖಡಗೇಕರ, ಜಿಲ್ಲಾ ಅರಣ್ಯಾಧಿಕಾರಿ ಪ್ರಶಾಂತ, ಕೊಳುರಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೀರೇಶ, ಕಪನಿಂಬರಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ವಿಜಯಾ, ಬಬಲಾದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿದ್ರಾಯ ಬಿರಾದಾರ ಸೇರಿದಂತೆ ಇತರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಮತ್ತಿತರರು ಹಾಜರಿದ್ದರು.