ಎಲೆಕ್ಟೋರಲ್ ಲಿಟರಸಿ ಕ್ಲಬ್ ಸಕ್ರಿಯಗೊಳಿಸುವಂತೆ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ
ZP CEO Muhammad Haris Sumer instructs to activate Electoral Literacy Club
ಬಳ್ಳಾರಿ 18: ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಲಾಗಿರುವ ಎಲೆಕ್ಟೋರಲ್ ಲಿಟರಸಿ ಕ್ಲಬ್ ಗಳ ಮೂಲಕ ಕಡ್ಡಾಯವಾಗಿ ಸ್ವೀಪ್ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಹೇಳಿದರು. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಎಲೆಕ್ಟೋರಲ್ ಲಿಟರಸಿ ಕ್ಲಬ್ ಗಳ ಮೂಲಕ ಸ್ವೀಪ್ ಚಟುವಟಿಕೆ ಆಯೋಜಿಸುವ ಕುರಿತು ನಗರದ ಜಿಲ್ಲಾ ಪಂಚಾಯತ್ ನ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಯುವ ಜನತೆಯಲ್ಲಿ, ವಿಶೇಷವಾಗಿ ಪ್ರಥಮ ಬಾರಿಗೆ ಮತದಾನ ಮಾಡುವವರಲ್ಲಿ (18 ವರ್ಷ ತುಂಬಲಿರುವ ವಿದ್ಯಾರ್ಥಿಗಳಲ್ಲಿ) ಚುನಾವಣಾ ಸಾಕ್ಷರತೆಯನ್ನು ಮೂಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಕಾಲೇಜು ಮತ್ತು ವಿಶ್ವವಿದ್ಯಾಲಯ ಹಂತದಲ್ಲಿ ವಿದ್ಯಾರ್ಥಿಗಳನ್ನು ಕೇವಲ ಶೈಕ್ಷಣಿಕವಾಗಿ ಮಾತ್ರವಲ್ಲದೆ, ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲು ಈ ಕ್ಲಬ್ಗಳು ನೆರವಾಗಲಿವೆ ಎಂದು ತಿಳಿಸಿದರು.ಮುಂದಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಇದು ಭಾರತೀಯ ಚುನಾವಣಾ ಆಯೋಗದ ಅತ್ಯಂತ ಪ್ರಮುಖ ಕಾರ್ಯಕ್ರಮವಾಗಿದ್ದು, ಮತದಾರರ ಶಿಕ್ಷಣ, ಮತದಾನದ ಜಾಗೃತಿ ಮೂಡಿಸುವುದು ಮತ್ತು ತನ್ಮೂಲಕ ದೇಶದಲ್ಲಿ ಸಾಕ್ಷರತಾ ಮತದಾನವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದರು.18 ವರ್ಷ ತುಂಬಿದ ಅಥವಾ ತುಂಬಲಿರುವ ಪ್ರತಿಯೊಬ್ಬ ವಿದ್ಯಾರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ವಿಶೇಷ ನೋಂದಣಿ ಡ್ರೈವ್ಗಳನ್ನು ನಡೆಸುವುದು. ಮತದಾನದ ಮಹತ್ವ ಸಾರುವ ಪ್ರಬಂಧ ಸ್ಪರ್ಧೆ, ಭಾಷಣ, ಚಿತ್ರಕಲೆ, ರಂಗೋಲಿ ಹಾಗೂ ಬೀದಿ ನಾಟಕಗಳನ್ನು ಆಯೋಜಿಸುವುದು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 