ಧಾರವಾಡ - ಹುಬ್ಬಳ್ಳಿ

ಆಗಸ್ಟ್‌ 19 ರಂದು ಜಿಲ್ಲಾ ಪಂಚಾಯತ ಕೆಡಿಪಿ ಸಭೆ

ಆಗಸ್ಟ್‌ 19 ರಂದು ಜಿಲ್ಲಾ ಪಂಚಾಯತ ಕೆಡಿಪಿ ಸಭೆ

ಧಾರವಾಡ 14: 2024-25 ನೇ ಸಾಲಿನ ಜೂನ್ 2024 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆಯನ್ನು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್‌ 12 ರಂದು ಆಯೋಜಿಸಲು ಉದ್ದೇಶಿಸಿದ್ದ  ಸಭೆಯನ್ನು ಆಗಸ್ಟ್‌ 19 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ.  

ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಗೆ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  




ಸುದ್ದಿ ಓದಿ