ಕೆಆರ್ಎಸ್ ಪಕ್ಷವು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲಿದೆ
ಜಿಲ್ಲಾ ಅಧ್ಯಕ್ಷ ಕಾಪು ಶ್ರೀನಿವಾಸ ರೆಡ್ಡಿ ಹೇಳಿಕೆ: ಪಕ್ಷದ ಅಭ್ಯರ್ಥಿಗಳ ಘೋಷಣೆ, ಪ್ರಣಾಳಿಕೆ ಬಿಡುಗಡೆ
ಬಳ್ಳಾರಿ ಮಾ 18: ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕೆಆರ್ಎಸ್ ಪಕ್ಷವು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲಿದ್ದು, ಬಳ್ಳಾರಿಯ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದೆ ಎಂದು ಜಿಲ್ಲಾ ಅಧ್ಯಕ್ಷ ಕಾಪು ಶ್ರೀನಿವಾಸ ರೆಡ್ಡಿ ಹೇಳಿದರು.
ನಗರದ ಜಿಲ್ಲಾಧಿಕರಿಗಳ ಕಚೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು, ಬಳ್ಳಾರಿ ನಗರ ಕ್ಷೇತ್ರ ಅಭ್ಯರ್ಥಿ ಯಾಗಿ,ಕಾಪು ಶ್ರೀನಿವಾಸರೆಡ್ಡಿ , ಬಳ್ಳಾರಿ ಗ್ರಾಮಾಂತರ ಕ್ಷೇತ್ರ ,ಅಭ್ಯರ್ಥಿಯಾಗಿ ಕಾವಲಿ ಮಾರೆಣ್ಣ, ಸಿರುಗುಪ್ಪ ತಾಲೂಕು ಅಭ್ಯರ್ಥಿಯಾಗಿ, ದೊಡ್ದ ಯಲ್ಲಪ್ಪ ಹಾಗೂ ಕಂಪ್ಲಿ,ಸಂಡೂರು ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ನಗರ ಕಾರ್ಯಾಧ್ಯಕ್ಷ ಡಾ.ಮಂಜುನಾಥ್, ಮಾತನಾಡಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಯಾವೆಲ್ಲಾ ಯೋಜನೆಗಳನ್ನು ರೂಪಿಸಬೇಕು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯದ ಜನಸಾಮಾನ್ಯರ ಜೊತೆ ಮತ್ತು ಚಿಂತಕರು ಹಾಗೂ ತಜ್ಞರ ಜೊತೆ ಹಲವಾರು ಸಭೆಗಳು ಮತ್ತು ಸಂವಾದಗಳನ್ನು ನಡೆಸಿದ ನಂತರ ಪಕ್ಷವು ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.
ರಾಜ್ಯ ಸರ್ಕಾರದಲ್ಲಿ ಪ್ರಸ್ತುತ ಖಾಲಿ ಇರುವ 3 ಲಕ್ಷಕ್ಕಿಂತಲೂ ಹೆಚ್ಚಿನ ಹುದ್ದೆಗಳನ್ನು ಒಂದು ವರ್ಷದ ಒಳಗೆ ಭರ್ತಿ ಮಾಡಲಾಗುವುದು. ಭ್ರಷ್ಟಾಚಾರರಹಿತ, ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತಕ್ಕಾಗಿ ಮತ್ತು ಲಂಚ/ಭ್ರಷ್ಟಾಚಾರ ನಿಗ್ರಹಕ್ಕಾಗಿ ಲೋಕಾಯುಕ್ತ ಬಲಪಡಿಸಲು ಕ್ರಮವಹಿಸಲು,ರಾಜ್ಯದಲ್ಲಿ ನಿವಾರಣೆಗಾಗಿ ಸಂಪೂರ್ಣ ಮದ್ಯ ನಿಷೇಧ,ಶಿಕ್ಷಣದ ಪ್ರತಿ ಹಂತದಲ್ಲಿಯೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಕ್ರಮ. ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಕನಿಷ್ಠ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕು. ಮತ್ತು ತಾಲ್ಲೂಕಿಗೊಂದು ಸರ್ಕಾರಿ ಮಲ್ಟಿ- ಸ್ಪಷಾಲಿಟಿ ಆಸ್ಪತ್ರೆ ನಿರ್ಮಾಣ.ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರ್ಥಿಕತೆ ನಿರ್ಮಾಣ, ಉದ್ಯೋಗಸೃಷ್ಠಿ ಗ್ರಾಮಸ್ವರಾಜ್ಯ
ವೈಜ್ಞಾನಿಕ ಬೆಳೆ ಮತ್ತು ಬೆಲೆ ಪದ್ಧತಿ ಜಾರಿ, ಕೃಷಿ ಉತ್ಪನ್ನಗಳಿಗೆ ಗ್ರಾಮೀಣ ಭಾಗದಲ್ಲಿಯೇ ಮೌಲ್ಯವರ್ಧನೆಗೆ ಶ್ರಮ, ಸಾಲಮುಕ್ತ ರೈತ ಬಡತನಮುಕ್ತ ಹಳ್ಳಿಗಳು, ರಾಜ್ಯಾದ್ಯಂತ ಕೆರೆಗಳನ್ನು ತುಂಬಿಸಿ ಅಂತರ್ಜಲ ಮಟ್ಟ ಏರಿಸಲು ಕ್ರಮ ವಹಿಸಿದೆ. ಹಾಗೂ ರಾಜ್ಯದ ಪ್ರತಿ ಹಳ್ಳಿ, ಪಟ್ಟಣಕ್ಕೂ ಮಳೆ, ನದಿ ಮೂಲದ ಕುಡಿಯುವ ನೀರಿನ ವ್ಯವಸ್ಥೆ. ರಾಜ್ಯದ ಪ್ರತಿ ಕೆರೆ ಮತ್ತು ಬಂಜರು ಭೂಮಿಗಳಲ್ಲಿ ಗ್ರಾಮ ಪಂಚಾಯಿತಿ ಮಾಲೀಕತ್ವದಲ್ಲಿ ಸೌರವಿದ್ಯುತ್ ಘಟಕ ಸ್ಥಾಪನ, ಸ್ಥಳೀಯವಾಗಿ ಪರಿಸರಸ್ನೇಹಿ ವಿದ್ಯುತ್ ಉತ್ಪಾದನೆಗೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ. ಕನರ್ಾಟಕದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಪ್ರಾಥಮಿಕ ಅದ್ಯತೆ ನೀಡಲಾಗಿದೆ.
ರಾಜ್ಯದ ನಿರುದ್ಯೋಗಿ ಪದವೀಧರರಿಗೆ ಕನಿಷ್ಠ 2000 ರೂಪಾಯಿ ಮಾಸಾಶನ,ನಿರುದ್ಯೋಗ ಭತ್ಯೆ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತರಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ, ಹನುಮಂತ ರೆಡ್ದಿ, ಕವಾಲಿ ಮಾರಣ್ಣ , ಮಹಮದ್ ಮುಸ್ತಾಕ್, ಸೇರಿದಂತೆ ಇತರರು ಇದ್ದರು