ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ: ಎಂ.ಬಿ.ಜಿರಲಿ
ಚಿಕ್ಕೋಡಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕೋಡಿ - ಸದಲಗಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ. ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ಪಕ್ಷದ ಎಲ್ಲ ನಾಯಕರು ಭೂತಮಟ್ಟದಿಂದ ಕೆಲಸ ಮಾಡಲಿದ್ದಾರೆ ಎಂದು ಚಿಕ್ಕೋಡಿ ಸದಲಗಾ ಕ್ಷೇತ್ರದ ಪ್ರಭಾರಿ ಎಂ.ಬಿ.ಜಿರಲಿ ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕೋಡಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರ ಒಳ್ಳೆಯ ಸರಕಾರ ನೀಡಿ ಜನರ ಮನಸ್ಸು ಗೆದ್ದಿದೆ. ಹೀಗಾಗಿ ಬರುವ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲುತ್ತದೆ ಎಂದರು.
ಇಡೀ ವಿಶ್ವದಲ್ಲಿ ಭಾರತ ದೇಶ ಆರ್ಥಿಕ ನೀತಿಯಲ್ಲಿ ಎತ್ತರ ಸ್ಥಾನದಲ್ಲಿ ಬೆಳವಣಿಗೆ ಸಾಧಿಸಿದೆ. ಜನಧನ ಯೋಜನೆ ಮೂಲಕ ಸಹಾಯಧನ ನೇರವಾಗಿ ಫಲಾನುಭವಿಗಳಿಗೆ ನೀಡಿದೆ. ಬಂದರು ಅಭಿವೃದ್ಧಿಗೆ ಬಿಜೆಪಿ ದೊಡ್ಡ ಕೊಡುಗೆ ನೀಡಿದೆ.ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಕಾಳಜಿ ವಹಿಸಿದೆ ಎಂದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ. ಡಬಲ್ ಇಂಜನ್ ಸರಕಾರ ದೇಶದ ಜನರಿಗೆ ಮೂಲಭೂತ ಸೌಕರ್ಯ ಒದಗಿಸಿ ಎಲ್ಲ ವರ್ಗದ ಜನರ ವಿಶ್ವಾಸ ಪಡೆದುಕೊಂಡಿದೆ. ಇಡೀ ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದರು.
ಮಹಾಂತೇಶ ಕವಟಗಿಮಠ. ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲ್ .ಪುರಸಭೆ ಉಪಾಧ್ಯಕ್ಷ ಸಂಜಯ ಕವಟಗಿಮಠ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ. ಅಪ್ಪಾಸಾಹೇಬ ಚೌಗಲೆ. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶಾಂಭವಿ ಅಶ್ವಥಪೂರ. ಶಕುಂತಲಾ ಡೋಣವಾಡೆ.ನಾಗರಾಜ ಮೇಧಾರ. ಬಾಬು ಮಿರ್ಜಿ . ಪ್ರಕಾಶ ಲಂಗೋಟೆ. ಪ್ರಶಾಂತ ಕಾಳಿಂಗೆ. ಸಂಜಯ ಪಾಟೀಲ ಮುಂತಾದವರು ಇದ್ದರು.