ಪರಿಕ್ಕರ್ ಸಿಎಂ ಸ್ಥಾನ ತ್ಯಜಿಸಲು ಕಾಂಗ್ರೆಸ್ ಆಗ್ರಹ
ಪಣಜಿ, ನ.21- ತೀವ್ರ ಅಸ್ವಸ್ಥರಾಗಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಕೂಡಲೇ ಸಿಎಂ ಸ್ಥಾನದಿಂದ 48 ಗಂಟೆಗಳೊಳಗೆ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಗೋವಾದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ಆರಂಭವಾಗಿದ್ದು, ತೀವ್ರ ಅನಾರೋಗ್ಯದ ಹೊರತಾಗಿಯೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿದಿರುವ ಮನೋಹರ ಪರಿಕ್ಕರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಹಲವು ಕಾಂಗ್ರೆಸ್ ಮುಖಂಡರು ಸೇರಿದಂತೆ ನೂರಾರು ಮಂದಿ ಮುಖ್ಯಮಂತ್ರಿಗಳ ಖಾಸಗಿ ನಿವಾಸಕ್ಕೆ ಪಾದಯಾತ್ರೆ ನಡೆಸಿದರು. ಪರಿಕ್ಕರ್ ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಅವರ ಸ್ಥಾನದಲ್ಲಿ ಪೂಣರ್ಾವಧಿ ಮುಖ್ಯಮಂತ್ರಿ ಬೇಕು ಎಂದು ಆಗ್ರಹಿಸಿದ್ದಾರೆ.
ಆಡಳಿತದ ಪುನಃ ಪ್ರತಿಷ್ಠಾಪನೆಗಾಗಿ ಜನರ ಪಾದಯಾತ್ರೆ ಎಂಬ ಘೋಷವಾಕ್ಯದೊಂದಿಗೆ ಸುಮಾರು ಒಂದು ಕಿಲೋ ಮೀಟರ್ ಪಾದಯಾತ್ರೆ ನಡೆಸಿ, ಪರಿಕ್ಕರ್ ರಾಜೀನಾಮೆಗೆ 48 ಗಂಟೆಗಳ ಗಡುವು ನೀಡಲಾಗಿದೆ. ಈ ಪಾದಯಾತ್ರೆಗೆ ಕಾಂಗ್ರೆಸ್ ಹೊರತುಪಡಿಸಿ, ಎನ್ಸಿಪಿ ಹಾಗೂ ಶಿವಸೇನೆ ಕೂಡಾ ಬೆಂಬಲ ಸೂಚಿಸಿದ್ದು, ಸಾಮಾಜಿಕ ಕಾರ್ಯಕರ್ತರು ಮತ್ತು ಸ್ವಯಂಸೇವಾ ಸಂಸ್ಥೆಗಳು ಈ ಪಾದಯಾತ್ರೆ ಆಯೋಜಿಸಿದ್ದವು.
ಪರಿಕ್ಕರ್ ತೀವ್ರ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಒಂಬತ್ತು ತಿಂಗಳಿಂದ ಪರಿಕ್ಕರ್ ಅಸ್ವಸ್ಥರಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಡೀ ರಾಜ್ಯದ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 