ಬೇರೆ ದೇಶಗಳಲ್ಲಿ ಶಾಲೆ ಆರಂಭಿಸಿದ ನಂತರ ಸೋಂಕು ಹೆಚ್ಚಾಗಿದೆ :ಸಿದ್ದರಾಮಯ್ಯ
ಬೆಂಗಳೂರು,ಜೂ.4,ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ ಕೋವಿಡ್ 19 ಸೋಂಕು ಹೆಚ್ಚಾಗಿದ್ದು, ಇದೀಗ ಎರಡು ತಿಂಗಳ ನಂತರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಶಾಲೆಗಳ ಪುನರಾರಂಭದ ಬಗ್ಗೆ ಸರ್ಕಾರ ಯೋಚನೆ ಮಾಡುವುದು ಸೂಕ್ತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ವರದಿಯಾಗುತ್ತಿವೆ. ಹೀಗಾಗಿ ಸೋಂಕು ಹೆಚ್ಚುತ್ತಿರುವ ಈಗಿನ ಸಂದರ್ಭದಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.ಶಾಲೆಗಳನ್ನು ಜುಲೈ ತಿಂಗಳಲ್ಲಿ ಪುನರಾರಂಭಿಸುವ ಪ್ರಸ್ತಾವವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಂದಿಟ್ಟಿದ್ದಾರೆ. ಇದರಿಂದ ಪೋಷಕರು ಆತಂಕಕ್ಕೊಳಗಾಗಿದ್ದು, ಸಚಿವರ ಪ್ರಸ್ತಾವವನ್ನು ವಿರೋಧಿಸುತ್ತಿದ್ದಾರೆ. ಸರ್ಕಾರ ಪೋಷಕರ ಆತಂಕ ಮತ್ತು ವಿರೋಧವನ್ನು ಗಮನಿಸಬೇಕು ಎಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಕ್ರಮಗಳನ್ನು ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ. ಶಾಲೆಗಳ ಆರಂಭಕ್ಕೆ ಸರ್ಕಾರ ಅವಸರದ ತೀರ್ಮಾನ ಮಾಡಬಾರದು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 