ರಾಷ್ಟ್ರೀಯ

ಕೇರಳ ಭೂಕುಸಿತ, ಮೃತರ ಸಂಖ್ಯೆ 21ಕ್ಕೆ ಏರಿಕೆ

ಕೇರಳ ಭೂಕುಸಿತ, ಮೃತರ ಸಂಖ್ಯೆ 21ಕ್ಕೆ ಏರಿಕೆ
ಪ್ರಾತಿನಿಧ್ಯ ಉದ್ದೇಶಕ್ಕಾಗಿ ಮಾತ್ರ ಚಿತ್ರ

ಇಡುಕ್ಕಿ,  ಆಗಸ್ಟ್ 8: ಕೇರಳದ ಇಡುಕ್ಕಿಯ ರಾಜಮಾಲಾದಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ  ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಇಂದು ಹೊಸದಾಗಿ  ಮತ್ತೆ ಮೂವರ ಮೃತದೇಹ ಪತ್ತೆಯಾಗಿದ್ದು ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಇನ್ನಷ್ಟು ಜೆಸಿಬಿಗಳನ್ನು ಸ್ಥಳಕ್ಕೆ ಕರೆತರಲಾಗಿದ್ದು, ಕಾಣೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ. ಆದರೆ ಭಾರಿ ಮಳೆ ಕಾರ್ಯಾಚರಣೆಗೆ ಅಡಚಣೆಯಾಗಿದೆ.

ಇನ್ನು ಪೆಟ್ಟಿಮುಡಿ ಪ್ರದೇಶಕ್ಕೆ ಸಚಿವ ಎಂ.ಎಂ. ಮಣಿ ಭೇಟಿ ನೀಡಿ, ಪರಿಶೀಲನೆ ನಡೆಸಸಿದ್ದಾರೆ  ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಸುದ್ದಿ ಓದಿ