ಸಿಂಧಗಿ

ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ

ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ

ಸಿಂದಗಿ28: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ, ತಾಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ ತುತರ್ು ರಾಜ್ಯ ಕಾರ್ಯಕಾರಿಣಿ ಸಭೆ ಯಲ್ಲಿ ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮಾ. 01 ರಿಂದ ಅನಿಧರ್ಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲು 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯದ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸಕರ್ಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಜು.01,2022 ರಿಂದ ಜಾರಿಗೊಳಿಸಬೇಕಾಗಿತ್ತು. ರಾಜ್ಯ ಸಕರ್ಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಸುಧಾಕರ್ರಾವ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದ್ದು. ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ಸಿದ್ದಪಡಿಸಿ ಸಲ್ಲಿಸಿತ್ತು.

ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಹಾಗೂ ಸಕರ್ಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು. ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸಕರ್ಾರದ ಜವಾಬ್ದಾರಿಯಾಗಿದ್ದಾಗ್ಯೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯು ಒಕ್ಕೂರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿ ಮಾ. 01ರಿಂದ ರಾಜ್ಯದ ಸಮಸ್ತ ಸಕರ್ಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿಧರ್ಿಷ್ಟಾವಧಿ ಮುಷ್ಕರ ಕ್ಕೆ ಕರೆ ನೀಡಲು ನಿರ್ಣಯಕೈಗೊಂಡಿದೆ.

: ಸಂಘದ ಪ್ರಮುಖ ಬೇಡಿಕೆಗಳು :

ರಾಜ್ಯ ಸರ್ಕಾ ರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ಜು. 01, 2022 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ. 40 ಫಿಟ್ಮೆಂಟ್ ಸೌಲಭ್ಯವನ್ನು ಜು. 01,2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು. ರಾಜ್ಯ ಎನ್.ಪಿ.ಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್ ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತಿಸ್ಘಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು. ಮಾ. 01ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕಅನಿರ್ಧಿಷ್ಟಾವಧಿ ಮುಷ್ಕರ ವನ್ನು ಬೆಂಬಲಿಸುವುದರೊಂದಿಗೆ ಯಶಸ್ವಿಗೊಳಿಸಲು ಸಿಂದಗಿ ತಾಲ್ಲೂಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ .ಸಿ. ತೆಲ್ಲೂರ, ಪ್ರ.ಕಾರ್ಯದರ್ಶಿಗಳಾದ ಗಿರಿಧರ .ಶಿವಬಸಪ್ಪ. ಗತಾಟೆ, ಉಪಾಧ್ಯಕ್ಷರು, ಎಸ್.ಎಮ್. ಚಿಗರಿ, ಹಾಗೂ ಗಂಗಾಧರ ಸೋಮನಾಯಕ, ಖಜಾಂಚಿಗಳಾದ ಶಿವರಾಜ ಚೌಧರಿ, ರಾಜ್ಯಪರಿಷತ್ ಸದಸ್ಯರಾದ ಎಫ್.ಬಿ. ಅರಳಿಮಟ್ಟಿ, ಸೇರಿದಂತೆ ಎಲ್ಲಾ ಸರ್ಕಾರಿ ಅಧಿಕಾರಿ-ನೌಕರರಲ್ಲಿ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಎಲ್ಲ ವೃಂಧ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು, ಎಲ್ಲ ಸರಕಾರಿ ನೌಕರರು ಹಾಜರಿದ್ದರು 

ಸುದ್ದಿ ಓದಿ