ಬ್ಯಾಡ್ಗಿ

ರೈತರು ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಿ: ಶಾಸಕ ಬಳ್ಳಾರಿ

ರೈತರು ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಿ: ಶಾಸಕ ಬಳ್ಳಾರಿ

ಬ್ಯಾಡಗಿ: ಸರಕಾರ ನೀಡುವ ಸವಲತ್ತುಗಳ ಬಗ್ಗೆ ರೈತರು ಅರಿತು ಸದುಪಯೋಗ ಪಡೆದುಕೊಳ್ಳುವ ಮೂಲಕ ಆರ್ಥಿಕ ಪ್ರಗತಿಯನ್ನು ಸಾಧಿಸಿದಾಗ ಮಾತ್ರ ಸರಕಾರದ ಯೋಜನೆಗಳ ಅನುಷ್ಠಾನಕ್ಕೆ ಸಾರ್ಥಕತೆ ಬರುತ್ತದೆ ಎಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಹೇಳಿದರು.

ತಾಲೂಕಿನ ಬುಡುಪನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ರೈತರಿಗೆ ಮೇವು ಕತ್ತರಿಸುವ ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರನ್ನು ಮತ್ತಷ್ಟು ಪ್ರೇರೇಪಿಸುವ ಉದ್ದೇಶದಿಂದ ಸಬ್ಸಿಡಿ ದರದಲ್ಲಿ ಮೇವು ಕತ್ತರಿಸುವ ಯಂತ್ರಗಳನ್ನು ವಿತರಿಸಲಾಗುತ್ತಿದೆ. ಮೇವಿನ ಸದ್ಭಳಕೆ ಹಾಗೂ ಮೇವಿನ ಬರವನ್ನು ನೀಗಿಸುವುದು, ಜಾನುವಾರು ಉತ್ಪನ್ನಗಳ ಹೆಚ್ಚಳ ಮತ್ತು ಮೇವಿನ ಸದ್ಭಳಕೆ ಮಾಡಲು ಪ್ರೇರೇಪಿಸುವ ಉದ್ದೇಶದಿಂದ ಹೈನುಗಾರಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಅರ್ಹ ರೈತರುಗಳಿಗೆ ಮೇವು ಕತ್ತರಿಸುವ ಯಂತ್ರಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದೆ ಎಂದರಲ್ಲದೇ, ಕೃಷಿಗೆ ಪೂರಕವಾದ ಹೈನೋದ್ಯಮದಲ್ಲಿ ರೈತರು ತೊಡಗಿಸಿಕೊಳ್ಳುವುದರಿಂದ ಇನ್ನೂ ಹೆಚ್ಚಿನ ಆರ್ಥಿಕ ಲಾಭವನ್ನು ಗಳಿಸಬಹುದು.

 ಮಳೆ ಮತ್ತು ಬೆಳೆ ಸಮಸ್ಯೆಯ ನಡುವೆ ಹೈನೋದ್ಯಮ ಕೈಹಿಡಿಯುತ್ತದೆ ಎಂದು ಹೇಳಿದರು.ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಶಾಂತಮಣಿ ಜೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ತಾಲೂಕಿನಲ್ಲಿ ಮೊದಲ ಹಂತದಲ್ಲಿ 21 ಪರಿಶಿಷ್ಟ ಜಾತಿಯ ರೈತರಿಗೆ ಮೇವು ಕತ್ತರಿಸುವ ಯಂತ್ರಗಳನ್ನು ನೀಡಲಾಗುತ್ತಿದ್ದು, ಮುಂದಿನ ಹಂತದಲ್ಲಿ ಎಲ್ಲ ವರ್ಗದ ರೈತರಿಗೂ ಸಬ್ಸಿಡಿ ದರದಲ್ಲಿ  ವಿತರಿಸಲಾಗುತ್ತದೆ ಎಂದರಲ್ಲದೇ, ಕೇಂದ್ರ ಹಾಗೂ ರಾಜ್ಯ ಸಕರ್ಾರಗಳು ಕೃಷಿ ಕ್ಷೇತ್ರದಲ್ಲಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದ್ದು, ಕೃಷಿ ಇಲಾಖೆಯು ಸಹ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸುತ್ತಿದೆ ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ಶಾಂತಮ್ಮ ಮೋಟೆಬೆನ್ನೂರ ವಹಿಸಿದ್ದರು. ಉಪಾಧ್ಯಕ್ಷ ಡಾ. ಹನುಮಂತಪ್ಪ ಸುಂಕಾಪುರ, ಮುಖಂಡರಾದ ಸುರೇಶ ಯತ್ನಳ್ಳಿ, ಬಸಪ್ಪ ಗೊರವರ, ದಿಳ್ಳೆಪ್ಪ ಸುಂಕಾಪುರ, ನವೀನ್ ಕಲ್ಲಳ್ಳಿ, ಕೃಷಿ ಅಧಿಕಾರಿ ಎಸ್.ಪಿ.ಮರಬಸಣ್ಣನವರ, ತಾಂತ್ರಿಕ ಕೃಷಿ ಅಧಿಕಾರಿ ಕೆ.ಬಿ.ಹಿರೇಹಾಳ, ಸಿದ್ದಪ್ಪ ಅಂಗಡಿ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು 

ಸುದ್ದಿ ಓದಿ