ಅತ್ಯದ್ಭುತ ಸಾಧನೆ ಮಾಡಿರುವ ಕಾವ್ಯಂಶ್ರೀರವರಿಗೆ ಸನ್ಮಾನ
ಲೋಕದರ್ಶನ ವರದಿ
ಗದಗ 5: ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ತಮ್ಮ ಇತ್ತೀಚಿನ ಮನ್ ಕಿ ಬಾತ್ ಸಂಚಿಕೆಯಲ್ಲಿ ಉಲ್ಲೇಖಿಸಿದ ಜಾನಪದ ಕಲಾ ಪ್ರಕಾರ ಹಾಗೂ ಪ್ರದರ್ಶನ ಕಲೆಗಳ ಕ್ಷೇತ್ರದಲ್ಲಿ ಅತ್ಯದ್ಭುತ ಸಾಧನೆ ಮಾಡಿರುವ ಕಾವ್ಯಂಶ್ರೀ (ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ್) ಅವರನ್ನು ಗದಗಿನಲ್ಲಿ ಸನ್ಮಾನಿಸಿದರು.
ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಮಹಾಂತೇಶ್ ಬಾತಾಖಾನಿ, ಉಸಿರು ಫೌಂಡೇಶನ್ ಅಧ್ಯಕ್ಷ ಶರಣ್ ಪಾಟೀಲ್, ಗದಗ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ರಾಚಯ್ಯ ಹೊಸಮಠ, ಬಿಜೆಪಿ ಮುಖಂಡರಾದ ದೇವೇಂದ್ರಪ್ಪ ಹೂಗಾರ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು