ಹೂವಿನಹಡಗಲಿ: ಇವಿಎಂ ಬದಲು ಮತಪತ್ರ ಬಳಸಿ
ಲೋಕದರ್ಶನ ವರದಿ
ಹೂವಿನಹಡಗಲಿ 20: ರಾಜ್ಯದ 15 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಇವಿಎಂ ಬದಲು ಮತಪತ್ರ ಬಳಸಿ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗವನ್ನು ಒತ್ತಾಯಿಸಿ ಕನರ್ಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾಂಗ್ರೆಸ್ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಪಚುನಾವಣೆಗಳಲ್ಲಿ ಜನತೆ ಕಾಂಗ್ರೆಸ್ ಬೆಂಬಲಿಸಲು ತೀರ್ಮಾನಿಸಿದ್ದು ಕೇಂದ್ರ ಸರ್ಕಾರ ಚುನಾವಣಾ ಆಯೋಗ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಬಿಜೆಪಿ ಸಚಿವರುಗಳಾದ ಈಶ್ವರಪ್ಪ ಮುಸ್ಲಿಂ ಮತಗಳ ಅವಶ್ಯಕತೆ ಇಲ್ಲವೆನ್ನುತ್ತಾರೆ, ಮಾಧುಸ್ವಾಮಿ ಕುರುಬರ ವಿರುದ್ಧ ಮಾತಾಡುತ್ತಾರೆ, ಅನಂತಕುಮಾರ ಹೆಗಡೆ ದಲಿತರು ಬೇಕಿಲ್ಲವೆನ್ನುತ್ತಾರೆ ಇನ್ನೂ ಯಡಿಯೂರಪ್ಪ ಒಕ್ಕಲಿಗರನ್ನು ಸೇರುತ್ತಿಲ್ಲ ಹೀಗಿರುವಾಗ ಇವರು ಹೇಗೆ ಗೆಲ್ಲಲು ಸಾಧ್ಯ? ಮತಯಂತ್ರ ನಂಬಿ ಚುನಾವಣೆಗೆ ಹೋಗಿರುವ ಅನುಮಾನ ನಮಗಿದೆ.
ಚುನಾವಣಾ ಆಯೋಗವು ಇತ್ತೀಚೆಗೆ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವತರ್ಿಸುತ್ತಿದ್ದು ನೀತಿ ಸಂಹಿತೆ ಜಾರಿಯಿಂದ ಹಿಡಿದು, ಅನರ್ಹರ ಪ್ರಕರಣದಲ್ಲಿ ಉಚ್ಚನ್ಯಾಯಾಲಯ ಕರೆಯದಿದ್ದರೂ ಮಧ್ಯಪ್ರವೇಶಿಸಿ ಒಂದು ಪಕ್ಷದ ಪರ ವರ್ತಿಸಿ ನಗೆಪಾಟಿಲಿಗೀಡಾಗಿದೆ.
ಅಮೇರಿಕಾ ಸೇರಿದಂತೆ ಅನೇಕ ಮುಂದುವರಿದ ದೇಶಗಳಲ್ಲಿ ಮತಪತ್ರ ಬಳಸಿ ಚುನಾವಣೆ ನಡೆಸುತ್ತಿದ್ದು ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾದ ನಮ್ಮ ಚುನಾವಣಾ ಆಯೋಗ ಜನರಿಗೆ ಒಂದು ಬಾರಿ ಅನುಮಾನ ಮೂಡಿದಲ್ಲಿ ಗೊಂದಲ ನಿವಾರಿಸಿ ತನ್ನ ಸಾಂವಿಧಾನಿಕ ಕರ್ತವ್ಯ ನಿರ್ವಹಿಸಿ ಪಾರದರ್ಶಕತೆಯಿಂದ ಜನರ ವಿಶ್ವಾಸಗಳಿಸಿಕೊಳ್ಳಲು ಈ ಬಾರಿ ಮತಪತ್ರ ಬಳಸಲು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 