ಮತದಾನ ಜಾಗೃತಿಗೆ ಬೃಹತ್ ಮಾನವ ಸರಪಳಿಯಲ್ಲಿ ಕರ್ನಾಟಕ ನಕ್ಷೆ: ಗಮನ ಸೆಳೆದ ನೃತ್ಯ
ಧಾರವಾಡ .19: ಏ.23 ರಂದು ಜರುಗುವ ಲೋಕಸಭಾ ಚುನಾವಣೆ ಮತದಾನದಲ್ಲಿ ಉತ್ತಮ ಮತದಾನ ದಾಖಲಿಸುವ ಮಹತ್ವಾಕಾಂಕ್ಷೆಯೊಂದಿಗೆ ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ನಿರಂತರವಾಗಿ ವೈವಿಧ್ಯಮಯ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ( ಸ್ವೀಪ್) ಸಮಿತಿಯ ಆಶ್ರಯದಲ್ಲಿಂದು ಬೆಳಿಗ್ಗೆ ನಗರದ ಕನರ್ಾಟಕ ಕಲಾ ಮಹಾವಿದ್ಯಾಲಯ ಆವರಣದಲ್ಲಿ ಜಿಲ್ಲೆಯ ವಿದ್ಯಾಥರ್ಿಗಳಿಂದ ಬೃಹತ್ ಮಾನವ ಸರಪಳಿ, ಚುನಾವಣಾ ಜಾಗೃತಿ ಗೀತೆ ,ನೃತ್ಯ ಕಾರ್ಯಕ್ರಮಗಳು ಜರುಗಿದವು.
ಆಂಗ್ಲ ವರ್ಣಮಾಲೆಯ ಆಘಆ ಖಗಿಇಇಕ ಹಾಗೂ ಕನರ್ಾಟಕ ನಕಾಶೆಯ ಮಾದರಿಯಲ್ಲಿ ನಿಂತ ಸಹಸ್ರಾರು ವಿದ್ಯಾಥರ್ಿಗಳು, ಚುನಾವಣಾ ಜಾಗೃತಿ ಗೀತೆಗಳಿಗೆ ಆಕರ್ಷಕ ಹೆಜ್ಜೆಗಳನ್ನು ಹಾಕಿದರು. ಗ್ರಾಮೀಣ ಶಾಲಾ ಶಿಕ್ಷಕಿಯರು ಲೋಕಸಭಾ ಚುನಾವಣೆ 2019 ಎಂದು ಬರೆದ ಬಿಂದಿಗೆಗಳೊಂದಿಗೆ ಹ್ಯಾಪಿ ವೋಟಸರ್್ ಡೇ ... ಹಾಡಿಗೆ ನೃತ್ಯ ಪ್ರದರ್ಶನ ಮಾಡಿದರು. ನೆರೆದ ಸಾವಿರಾರು ವಿದ್ಯಾಥರ್ಿಗಳು, ಯುವಜನರು ಹಾಗೂ ಸಾರ್ವಜನಿಕರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ವಿದ್ಯಾಥರ್ಿಗಳನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು, ಇದೇ ಮೊದಲ ಬಾರಿಗೆ ಮತದಾನಕ್ಕೆ ಅರ್ಹತೆ ಪಡೆದಿರುವ ಯುವಜನರು, ಮತಚಲಾಯಿಸಿ ಬೆರಳಿಗೆ ಹಾಕಿಸಿಕೊಂಡ ಶಾಹಿ ಹಾಗೂ ಮತಗಟ್ಟೆ ಕಾಣುವ ಹಾಗೆ ಸೆಲ್ಫಿ ತೆಗೆದುಕೊಂಡು ಜಿಲ್ಲಾ ಸ್ವೀಪ್ ಸಮಿತಿಗೆ ಕಳಿಸಿದರೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವದು. ಮತದಾನಕ್ಕೆ ಅರ್ಹತೆ ಹೊಂದದೇ ಇರುವ ಮಕ್ಕಳು ತಮ್ಮ ಪಾಲಕರು,ಪೋಷಕರಿಗೆ ಯಾವುದೇ ಆಸೆ,ಆಮಿಷಗಳಿಗೆ ಒಳಗಾಗದೇ ಕಡ್ಡಾಯವಾಗಿ ಮತ ಚಲಾಯಿಸಲು ತಿಳಿಸಬೇಕು ಎಂದರು.
ಎಫ್.ಬಿ.ಕಣವಿ,ರಾಮು ಮೂಲಗಿ, ಪ್ರಕಾಶ ಕಂಬಳಿ ,ಬಾಬಾಜಾನ್ ಮುಲ್ಲಾ ಮತ್ತು ತಂಡದವರು ಸುಶ್ರಾವ್ಯವಾದ ಚುನಾವಣಾ ಜಾಗೃತಿ ಗೀತೆಗಳನ್ನು ಹಾಡಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ,ಜಿಪಂ ಸಿಇಓ ಡಾ.ಬಿ.ಸಿ.ಸತೀಶ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ಗಜಾನನ ಮನ್ನಿಕೇರಿ, ಸಮಾಜ ಕಲ್ಯಾಣ ಜಂಟಿ ನಿದರ್ೇಶಕ ಎನ್. ಮುನಿರಾಜು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕ ಬಸವರಾಜ ವರವಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಎ.ಎಂ.ಮಿರ್ಜಣ್ಣವರ, ಜಿಲ್ಲಾ ವಾತರ್ಾಧಿಕಾರಿ ಮಂಜುನಾಥ ಡೊಳ್ಳಿನ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎ.ಖಾಜಿ,ವಿದ್ಯಾ ನಾಡಿಗೇರ, ಎಸ್.ಎಂ.ಹುಡೇದಮನಿ, ಸ್ವೀಪ್ ಸಮಿತಿಯ ಕೆ.ಎಂ.ಶೇಖ್, ಜಿ.ಎನ್.ನಂದನ ಮತ್ತಿತರರ ಅಧಿಕಾರಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 