ಧಾರವಾಡ.04: ಕೃಷಿ, ಕೂಲಿ, ಕಟ್ಟಡ ಕಾಮರ್ಿಕರು ಸೇರಿದಂತೆ ಶಾಲಾ ಮಕ್ಕಳನ್ನು ನಿಯಮ ಬಾಹಿರವಾಗಿ ಸರಕು ಸಾಗಾಣಿಕೆ ವಾಹನದಲ್ಲಿ ಒಯ್ಯುವುದು ಅಪರಾಧ. ಉದ್ಯೋಗದಾತರು ತಮ್ಮ ಕಾರ್ಮಿಕರ ಬಗ್ಗೆ ಕಳಕಳಿ, ಸಂವೇದನಾಶೀಲತೆ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಾರ್ಮಿಕರ ಇಲಾಖೆಯಿಂದ ಆಯೋಜಿಸಿದ್ದ 'ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ರಿಟ್ ಅಜರ್ಿ ಪ್ರಕರಣ' ಕುರಿತಂತೆ ಜರುಗಿದ ಉದ್ಯೋಗದಾತರ ಹಾಗೂ ಕಾರ್ಮಿಕರ ವರ್ಗದ ಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಸಭೆ ಉದ್ದೇಶಿಸಿ, ಮಾತನಾಡಿದರು.
ಮಾನ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಮುಂದಿನ ತಿಂಗಳು ಕಾರ್ಮಿಕರ ಹಿತಾಸಕ್ತಿ ಕಾಪಾಡುವ ಕುರಿತು ಕ್ರಿಯಾಯೋಜನೆ ಸಲ್ಲಿಸಲಾಗುತ್ತಿದೆ. ಕ್ರಿಯಾಯೋಜನೆಯಲ್ಲಿ ಕಾಮರ್ಿಕರಿಗೆ ಉದ್ಯೋಗದಾತ ಕಾಖರ್ಾನೆ, ಕಂಪನಿ ಹಾಗೂ ಶಾಲಾ-ಕಾಲೇಜುಗಳಿಗೆ ಪ್ರತ್ಯೇಕವಾಗಿ ಜನಜಾಗೃತಿ ಮತ್ತು ತಿಳುವಳಿಕೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಆಡಳಿತಮಂಡಳಿಯವರು ಸಹಕಾರ ನೀಡಬೇಕು. ಸರಕು ಸಾಗಾಣಿಕೆ ವಾಹನದಲ್ಲಿ ಯಾವುದೇ ಕಾರಣಕ್ಕೂ ಕಾಮರ್ಿಕರನ್ನು, ಶಾಲಾ ಮಕ್ಕಳನ್ನು ಸಾಗಾಣಿಕೆ ಮಾಡುವಂತಿಲ್ಲ. ವಿದ್ಯಾಥರ್ಿಗಳನ್ನು ಸುರಕ್ಷಿತವಾಗಿ ಅವರ ಮನೆಯಿಂದ ಕರೆತಂದು ಶಾಲೆಯಿಂದ ಮರಳಿ ಅವರ ಮನೆಗೆ ತಲುಪುವಂತೆ ಮಾಡುವುದು ಆಯಾ ಶಾಲಾ ಆಡಳಿತಮಂಡಳಿ ಜವಾಬ್ದಾರಿಯಾಗಿದೆ.
ನಿಯಮ ಮೀರಿ ಮಕ್ಕಳನ್ನು ಸಾಗಿಸುವ ವಾಹನ ಹಾಗೂ ಸರಕು ಸಾಗಾಣಿಕೆ ವಾಹನದಲ್ಲಿ ಕಾಮರ್ಿಕರನ್ನು ಒಯ್ಯುವುದು ಅಪರಾಧವಾಗಿದೆ. ಆದ್ದರಿಂದ ಎಲ್ಲ ಉದ್ಯೋಗದಾತರು ಕಾಮರ್ಿಕರ, ಶಾಲಾ ಮಕ್ಕಳ ಸುರಕ್ಷತೆ, ಕ್ಷೇಮದ ಬಗ್ಗೆ ಮುಂಜಾಗೃತೆ ವಹಿಸಿ, ಕ್ರಮ ಕೈಗೊಳ್ಳಬೇಕೆಂದು ಅವರು ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿ ಕಾಮರ್ಿಕ ಇಲಾಖೆ ಆಯುಕ್ತ ಪಾಲಯ್ಯ ಅವರು ಮಾತನಾಡಿ, ಕಾರ್ಮಿಕರ ಹಿತಾಸಕ್ತಿ ಕಾಪಾಡಲು ಮತ್ತು ಅವರ ಸುರಕ್ಷತೆಗಾಗಿ ಇಲಾಖೆ ಹಲವಾರು ನಿಯಮಗಳನ್ನು ಜಾರಿ ಮಾಡಿ, ಅನುಷ್ಠಾನಗೊಳಿಸಿದೆ. ಮಾನ್ಯ ಉಚ್ಛ ನ್ಯಾಯಾಲಯವು ಕಾಖರ್ಾನೆಗಳಿಗೆ, ಕಂಪನಿಗಳಿಗೆ ಅಗತ್ಯವಿರುವ ಕೆಲಸಗಾರರು ಅಸುರಕ್ಷಿತ ವಾಹನ ಬಳಕೆ ಮಾಡುತ್ತಿರುವ ಕುರಿತು ಪರಿಶೀಲಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಲು ಮಾರ್ಗಸೂಚಿ ನೀಡಿದೆ.
ಅದರಂತೆ ಕಾಖರ್ಾನೆ, ಕಂಪನಿ ಮತ್ತು ಶಾಲಾ-ಕಾಲೇಜು ಆಡಳಿತ ಮಂಡಳಿಗಳು ತಮ್ಮ ಕಾಮರ್ಿಕರ, ವಿದ್ಯಾಥರ್ಿಗಳ ಸುರಕ್ಷತೆಗಾಗಿ ಕಾಳಜಿ ವಹಿಸಬೇಕು ಮತ್ತು ಈ ಕುರಿತು ಸೂಕ್ತ ಕ್ರಮಕೈಗೊಳ್ಳಬೇಕು. ಕಾರ್ಮಿಕರ ಇಲಾಖೆಯೂ ಸಹ ಇತರ ಇಲಾಖೆಗಳ ನೆರವಿನೊಂದಿಗೆ ಸಹಕಾರ ನೀಡುತ್ತದೆ. ತಮ್ಮ ಬೇಡಿಕೆಗಳಿದ್ದರೆ ಚಚರ್ಿಸಿ ಸಲಹೆಗಳನ್ನು ನೀಡಬೇಕೆಂದು ಅವರು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಆರ್.ಎಸ್. ಚಿಣ್ಣನ್ನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಬಿ.ಸಿ. ಸತೀಶ್, ಉಪಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಮತ್ತು ಮಹಾನಗರ ಉಪಪೊಲೀಸ್ ಆಯುಕ್ತ ಶಿವಕುಮಾರ ಗುಣಾತಿ ಅವರು ಸಭೆಯಲ್ಲಿ ಮಾತನಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಸಾರಿಗೆ ಇಲಾಖೆ, ಎನ್ಡಬ್ಲ್ಯೂ ಕೆಎಸ್ಆರ್ಟಿಸಿ, ಕಾಖರ್ಾನೆ ಮತ್ತು ಬಾಯ್ಲರ್ಗಳ ಇಲಾಖೆ, ವಿವಿಧ ಕಾಮರ್ಿಕ ಪ್ರತಿನಿಧಿಗಳ ಸಂಘ ಸಂಸ್ಥೆಗಳು, ಉದ್ಯೋಗದಾತರುಗಳ ಸಂಘದ ಪ್ರತಿನಿಧಿಗಳು, ಖಾಸಗಿ ಶಾಲಾ ಕಾಲೇಜು ಆಡಳಿತಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು ಸಭೆಯಲ್ಲಿ ಭಾಗವಹಿಸಿ, ತಮ್ಮ ಅಭಿಪ್ರಾಯ ಸಲಹೆ ನೀಡಿದರು.