ಇಂದು ಸರಿಗಮ ಖ್ಯಾತಿಯ ಹನುಮಂತನಿಂದ ಮತಗಾನ ಕಾರ್ಯಕ್ರಮ
ಹಾವೇರಿ17: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾರರ ಜಾಗೃತಿಗಾಗಿ ಇಂದು ಸಂಜೆ 6 ಗಂಟೆಗೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣ(ಮುನ್ಸಿಪಲ್ ಹೈಸ್ಕೂಲ್ ಮೈದಾನ) ಆವರಣದಲ್ಲಿ ಸರಿಗಮ ಖ್ಯಾತಿಯ ಹಾಡುಗಾರ ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ಹನುಮಂತಪ್ಪ ಲಮಾಣಿ ಅವರಿಂದ ಮತದಾನ ಜಾಗೃತಿ ಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಲಾದ ಮತಗಾನ ಕಾರ್ಯಕ್ರಮದಲ್ಲಿ ಗಾಯಕ ಹನುಮಂತಪ್ಪ ಲಮಾಣಿ ಅವರೊಂದಿಗೆ ವಿವಿಧ ಗಾಯಕರು ಭಾಗವಹಿಸಲಿದ್ದಾರೆ. ಮತಗಾನ ಕಾರ್ಯಕ್ರಮಕ್ಕೆ ಮುನ್ನ ಗಾಂಧಿ ವೃತ್ತದಿಂದ ಎತ್ತಿನ ಬಂಡಿಯಲ್ಲಿ ಜಿಲ್ಲಾ ಸ್ವೀಪ್ ರಾಯಭಾರಿ ಗಾಯಕ ಹನುಮಂತಪ್ಪ ಲಮಾಣಿ ಸವಾರಿ ಮಾಡಿ ಮತಜಾಗೃತಿ ಮೂಡಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸುವಂತೆ ಜಿಲ್ಲಾ ಸ್ವೀಪ್ ಸಮಿತಿ ಕೋರಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 