ಜನಾರ್ಧನ ರೆಡ್ಡಿಯಿಂದ ಭಾಜಪ ನಾಯಕರು ಹಣದ ಸಹಾಯ ಪಡೆದಿರುವ ಸಾಧ್ಯತೆ ಇದೆ: ಜೆಡಿಎಸ್
ಬೆಂಗಳೂರು 16, ಮಾಜಿ ಸಚಿವ ಜನಾರ್ದನರೆಡ್ಡಿ ಪರ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸಮಥರ್ಿಸಿಕೊಳ್ಳುತ್ತಿದ್ದಾರೆ. ಅವರಿಂದ ಯಾವ ರೀತಿ ಲಾಭ ಪಡೆದಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಜೆಡಿಎಸ್ ವಕ್ತಾರ ರಮೇಶ್ಬಾಬು ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಜನಾರ್ದನರೆಡ್ಡಿ ಅವರಿಂದ ಬಿಜೆಪಿ ನಾಯಕರು ಹಣದ ರೂಪದ ಸಹಾಯ ಪಡೆದಿರುವ ಸಾಧ್ಯತೆ ಇದೆ. ಇದನ್ನು ಖಚಿತ ಪಡಿಸಿದರೆ ಅದರ ಬಗ್ಗೆ ತನಿಖೆ ನಡೆಸುವಂತೆ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಜನಾರ್ಧನರೆಡ್ಡಿ ಅವರು ಮೊದಲು ನಾಲ್ಕು ವರ್ಷ ಜೈಲಿನಲ್ಲಿದ್ದು ಬಂದಿದ್ದಾರೆ. ಬಳ್ಳಾರಿಗೆ ಕಾಲಿಡದಂತೆ ನಿರ್ಬಂಧ ಹೇರಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಕರ್ಾರದ ದ್ವೇಷದ ರಾಜಕಾರಣ ಮಾಡುತ್ತಿರುವುದಾಗಿ ಜನಾರ್ದನರೆಡ್ಡಿ ಸೇರಿದಂತೆ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಇದು ಸರಿಯಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಜನಾರ್ದನರೆಡ್ಡಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಸಕರ್ಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದಿದ್ದಾರೆ. ಇದರ ಬಗ್ಗೆ ಸ್ಪಷ್ಟಪಡಿಸಬೇಕೆಂದು ಅವರು ಒತ್ತಾಯಿಸಿದರು.
ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಮೊದಲು ಬಿಜೆಪಿಯವರು ಜನಾರ್ದನರೆಡ್ಡಿ ಅವರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಲಿ. ಅಲ್ಲದೆ ರೆಡ್ಡಿ ಕೂಡ ಉದ್ದಟತನವನ್ನು ಬಿಡಬೇಕೆಂದು ಆಗ್ರಹಿಸಿದರು.
ತಮಗೆ ತಾವು ಪುಣ್ಯಕೋಟಿ ಎಂದು ಬಣ್ಣಿಸಿಕೊಂಡು ಅದರ ಕಥೆ ಹೇಳುತ್ತಾರೆ. ಅವರು ಏನು ಎಂಬುದು ಎಲ್ಲರಿಗೂ ಗೊತ್ತಿದೆ. ನಿಜವಾದ ಪುಣ್ಯಕೋಟಿ ಎಂದರೆ ಅದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದರು. ಸಕರ್ಾರಕ್ಕೆ ಬದ್ಧತೆ ಇದೆ. ದ್ವೇಷದ ರಾಜಕಾರಣ ಮಾಡುವುದಿಲ್ಲ. ಆ್ಯಂಬಿಡೆಂಟ್ ಕಂಪೆನಿ ವಿರುದ್ಧ ಸಕರ್ಾರ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 