ಜಮಖಂಡಿ

ವಿದ್ಯಾರ್ಥಿಗಳು ಶಿಕ್ಷಣ ಜ್ಞಾನ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ

ವಿದ್ಯಾರ್ಥಿಗಳು ಶಿಕ್ಷಣ ಜ್ಞಾನ ಪಡೆದು  ಉತ್ತಮ ಭವಿಷ್ಯ ರೂಪಿಸಿಕೊಳ್ಳಿ
ಜಮಖಂಡಿ ತಾಲೂಕಿನ ಸಿದ್ದಾಪೂರ ಗ್ರಾಮದ ಪ್ರಭುಲಿಂಗೇಶ್ವರ ಶಿಕ್ಷಣ ಸಂಸ್ಥೆ ಪುಷ್ಪಾತಾಯಿ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇ

ಲೋಕದರ್ಶನ ವರದಿ,

ಜಮಖಂಡಿ17: ಎಂಬತ್ತರ ದಶಕದ ಶಿಕ್ಷಣ ವ್ಯವಸ್ಥೆಗೂ ಇಂದಿನ ಶಿಕ್ಷಣ ವ್ಯವಸ್ಥೆ ಬಹಳಷ್ಟು ವ್ಯತ್ಯಾಸವಿದೆ. ತಂತ್ರಜ್ಞಾನ ಯುಗದಲ್ಲಿ ಶಿಕ್ಷಣಕ್ಷೇತ್ರ ಬಹಳಷ್ಟು ಮಹತ್ವ ಪಡೆದುಕೊಂಡಿದೆ. ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಜ್ಞಾನ ಪಡೆದು ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಾಗಿದೆ ಎಂದು ಲಿಂಗನೂರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯದ್ಯಾಧಿಕಾರಿ ಡಾ.ಚಿಕ್ಕಪ್ಪ ನಾಯಕ ಹೇಳಿದರು.

ತಾಲೂಕಿನ ಸಿದ್ದಾಪೂರ ಗ್ರಾಮದ ಪ್ರಭುಲಿಂಗೇಶ್ವರ ಶಿಕ್ಷಣ ಸಂಸ್ಥೆ ಪುಷ್ಪಾತಾಯಿ ಕನ್ನಡ ಮಾಧ್ಯಮ ಪ್ರಾಥಮಿಕ, ಪ್ರೌಢಶಾಲೆ, ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ 17ನೇ ವಾರ್ಷಿ ಕ ಸ್ನೇಹಸಮ್ಮೇಳನ, ಬೀಳ್ಕೊಡುವ ಸಮಾರಂಭ ಮತ್ತು ಪ್ರಭು ಅವಾರ್ಡ್ ವಿತರಣಾ ವೇದಿಕೆಯಲ್ಲಿ ವಚನಕಾರ ಶರಣ ಅಲ್ಲಮಪ್ರಭು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದಿನ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿರುವ ಹಲವಾರು ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಅವಕಾಶಗಳಿಗೆ. ಆರ್ಥಿಕ ಸಮಸ್ಯೆಯಿಂದ ಯಾರೊಬ್ಬರೂ ಶಿಕ್ಷಣದಿಂದ ವಂಚಿತರಾಗಬಾರದು. ಉನ್ನತ ಶಿಕ್ಷಣಕ್ಕಾಗಿ ಸ್ಕಾಲರಶಿಫ್, ಸಾಲ ವ್ಯವಸ್ಥೆ ಸರಕಾರದ ಯೋಜನೆಗಳನ್ನು ಬಳಸಿಕೊಂಡು ದೇಶದ ಉನ್ನತ ಪ್ರಜೆಗಳಾಗಬೇಕು ಎಂದರು.

ಉಧ್ಯಮಿ ಜಗದೀಶ ಗುಡಗುಂಟಿ ಮಾತನಾಡಿದರು. ಮಾತೋಶ್ರಿ ಪುಷ್ಪಾತಾಯಿ ಗುಡಗುಂಟಿ ಅಧ್ಯಕ್ಷತೆ ವಹಿಸಿದ್ದರು. ಮುತ್ತಿನಕಂತಿ ಮಠದ ಶಿವಲಿಂಗ ಶಿವಾಚಾರ್ಯರು, ಕೊಣ್ಣೂರ ಹೊರಗಿನಮಠದ ಡಾ.ವಿಶ್ವಪ್ರಭುದೇವರು ಸಾನಿಧ್ಯ ವಹಿಸಿದ್ದರು. ವೇದಿಕೆಯಲ್ಲಿ ಪ್ರಭುಲಿಂಗೇಶ್ವರ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಪ್ರೊ.ವೈ.ಬಿ.ಹೊಟ್ಟಿ, ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಮುಖ್ಯಶಿಕ್ಷಕ ಕೆ.ವೈ.ಭೂತಾಳಿ ಸಹಿತ ಹಲವರು ಇದ್ದರು.


ಸುದ್ದಿ ಓದಿ