ನಿರ್ಭಯಾ ಪ್ರಕರಣ: ಅಪರಾಧಿಗಳಿಗೆ ಗಲ್ಲು ಖಾಯಂಗೊಳಿಸಿದ ಸುಪ್ರೀಂ
ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಸುಪ್ರೀಂ ಕೋಟರ್್ ಸೋಮವಾರ ಗಲ್ಲು ಶಿಕ್ಷೆ ಖಾಯಂಗೊಳಿಸಿದೆ.
ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ, ನ್ಯಾಯಮೂತರ್ಿ ಆರ್ ಬಾನುಮತಿ ಹಾಗೂ ನ್ಯಾಯಮೂತರ್ಿ ಅಶೋಕ್ ಭೂಷಣ್ ಅವರನ್ನೊಳಗೊಂಡ ಪೀಠ, ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕು ಎಂದು ಕೋರಿ ಮೂವರು ಅಪರಾಧಿಗಳು ಸಲ್ಲಿಸಿದ್ದ ಮರು ಪರಿಶೀಲನಾ ಅಜರ್ಿಯನ್ನು ಇಂದು ವಜಾಗೊಳಿಸಿದೆ.
ಒಟ್ಟು ನಾಲ್ಕು ಅಪರಾಧಿಗಳ ಪೈಕಿ ಮೂವರು ಅಪರಾಧಿಗಳಾದ ಮುಕೇಶ್ (31), ಪವನ್ ಗುಪ್ತ(31), ವಿನಯ್ ಶಮರ್ಾ (25) ಮರು ಪರಿಶೀಲನಾ ಅಜರ್ಿ ಸಲ್ಲಿಸಿದ್ದರು.
2012ರಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಅಮಾನುಷ ಕೊಲೆ ಪ್ರಕರಣ ಸಂಪೂರ್ಣ ದೇಶವನ್ನು ಬೆಚ್ಚಿಬೀಳಿಸಿತ್ತು. ಘಟನೆಗೆ ಸಂಬಂಧಿಸಿದಂತೆ ಜಗತ್ತಿನಾದ್ಯಂತ ಖಂಡನೆ ವ್ಯಕ್ತವಾಗಿತ್ತು.
ಸುಪ್ರೀಂ ತೀಪು ತೃಪ್ತಿ ತಂದಿದೆ, ಆದ್ರೆ ನ್ಯಾಯ ವಿಳಂಬವಾಗಿ ಸಿಕ್ಕಿದೆ: ಪೋಷಕರು
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ ಸುಪ್ರೀಂ ಕೋಟರ್್ ತೀಪರ್ಿನ ಬಗ್ಗೆ ಸಂತ್ರಸ್ಥೆ ಪೋಷಕರು ತೃಪ್ತಿ ವ್ಯಕ್ತಪಡಿಸಿದ್ದಾರೆ. ಆದರೆ ನ್ಯಾಯ ಸಿಗಲು ವಿಳಂಬವಾಯಿತು ಎಂದಿದ್ದಾರೆ.ಗಲ್ಲು ಶಿಕ್ಷೆ ವಿರುದ್ಧ ಮೂವರು ಅಪರಾಧಿಗಳು ಸಲ್ಲಿಸಿದ್ದ ಮರು ಪರಿಶೀಲನಾ ಅಜರ್ಿಯನ್ನು ಸುಪ್ರೀಂ ಕೋಟರ್್ ಇಂದು ವಜಾಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂತ್ರಸ್ಥ ಮಹಿಳೆ ತಂದೆ ಬದ್ರಿನಾಥ್ ಸಿಂಗ್ ಅವರು, ಸುಪ್ರೀ ತೀಪರ್ಿನಿಂದ ನಮ್ಮ ನಂಬಿಕೆ ನಿಜವಾಗಿದೆ. ಆದರೆ ಮುಂದೇನು? ಈಗಾಗಲೇ ಸಾಕಷ್ಟು ಸಮಯ ಕಳೆದಿದೆ. ಆದಷ್ಟು ಬೇಗ ಕಾಮುಕರನ್ನು ಗಲ್ಲಿಗೇರಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮ ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ. ನ್ಯಾಯ ಸಿಗಲು ತುಂಬಾ ವಿಳಂಬವಾಗಿದೆ. ಇದರಿಂದ ಇತರೆ ಹೆಣ್ಣುಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ನ್ಯಾಯಾಂಗ ವ್ಯವಸ್ಥೆ ಮತ್ತಷ್ಟು ಕಠಿಣವಾಗಬೇಕು ಎಂದು ಮನವಿ ಮಾಡಿಕೊಳ್ಳುವುದಾಗಿ ಸಂತ್ರಸ್ಥೆ ತಾಯಿ ಆಶಾ ದೇವಿ ಅವರು ಹೇಳಿದ್ದಾರೆ. ಇನ್ನು ಈ ವೇಳೆ ಮಾತನಾಡಿದ ಸಂತ್ರಸ್ಥೆ ಕುಟುಂಬದ ಪರ ವಕೀಲ ರೋಹನ್ ಮಹಾಜನ್ ಅವರು, ಇದೊಂದು ಗೆಲುವಿನ ಕ್ಷಣ. ನ್ಯಾಯಾಂಗದ ಮೇಲಿನ ನಂಬಿಕೆ ಮತ್ತಷ್ಟು ಗಟ್ಟಿಯಾಗಿದೆ. ಸುಪ್ರೀಂ ಕೋಟರ್್ ತೀಪರ್ಿನ ಬಗ್ಗೆ ನಮಗೆ ತೃಪ್ತಿ ಇದೆ ಎಂದರು.
ಸಮಾಜದಲ್ಲಿ ಕಾನೂನು, ಸುವ್ಯವಸ್ಥೆ ಕುಸಿದಿದೆ: ನಿರ್ಭಯಾ ತಾಯಿ
ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀಪು ಇಂದು ಹೊರ ಬೀಳಲಿದೆ, ಇದೇ ವೇಳೆ ಮಾತನಾಡಿರುವ ನಿರ್ಭಯ ತಾಯಿ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಫಲವಾಗಿದೆ ಎಂದು ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ 2012ರ ದೆಹಲಿ ಗ್ಯಾಂಗ್ ರೇಪ್ ಸಂತ್ರಸ್ತೆ ನಿರ್ಭಯಾ ತಾಯಿ ಆಶಾದೇವಿ, ಘಟನೆ ನಡೆದು ಆರು ವರ್ಷಗಳಾಗಿವೆ, ದೇಶದ ಹಲವೆಡೆ ಪ್ರತಿದಿನ ಇಂಥಹುದ್ದೇ ಘಟನೆಗಳು ನಡೆಯುತ್ತಿವೆ, ಇವುಗಳನ್ನು ತಡೆಯುವಲ್ಲಿ ನಮ್ಮ ವ್ಯವಸ್ಥೆ ವಿಫಲವಾಗಿದೆ, ಹಲವು ವರ್ಷಗಳ ನಂತರವೂ ಮಹಿಳೆಯರ ಮೇಲೆ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಿವೆ, ತೀಪು ಪ್ರಕಟಿಸುವ ಸುಪ್ರೀಂ ಕೋಟರ್್ ಆಪರಾಧಿಗಳ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಬಾರದು ಎಂದು ಮನವಿ ಮಾಡಿದ್ದಾರೆ.ಎಲ್ಲಾ ಅಪರಾಧಿಗಳಿಗೂ ಗಲ್ಲು ಶಿಕ್ಷೆ ಕಡಿಮೆಯೇ ಸುಪ್ರೀಂಕೋಟರ್್ ನೀಡುವ ತೀಪು ಎಲ್ಲರಿಗೂ ಉದಾಹರಣೆಯಾಗಿರಬೇಕು ಎಂದು ಹೇಳಿದ್ದಾರೆ,. ಇನ್ನೂ ನಿರ್ಭಯಾ ತಂದೆ ಮಾತನಾಡಿ,ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ,. ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಮಗೆ ನೀಡಲಾಗಿರುವ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಮೂವರು ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಸುಪ್ರಿ?ಂ ಕೋಟರ್್ ಇಂದು ತೀಪು ಪ್ರಕಟಿಸಲಿದೆ. ಅಪರಾಧಿಗಳಾದ ಪವನ್ ಗುಪ್ತಾ (22), ವಿನಯ್ ಶರ್ಮ (23) ಮುಕೇಶ್ (29) ಮತ್ತು ಅಕ್ಷಯ್ ಕುಮಾರ್ ಸಿಂಗ್ಗೆ (31) ಗಲ್ಲು ಶಿಕ್ಷೆ ವಿಧಿಸಿತ್ತು. ಅಕ್ಷಯ್ ಹೊರತು ಪಡಿಸಿ ಉಳಿದ ಮೂವರು ಅಪರಾಧಿಗಳು ತಮಗೆ ನೀಡಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಸುಪ್ರಿ?ಂ ಕೋಟರ್್ ಮೆಟ್ಟಿಲೇರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 