ನ. 1ರಂದು ನಾಡು ನುಡಿ, ಸಂಸ್ಕೃತಿ ಕಾರ್ಯಕ್ರಮ
ಸಿರುಗುಪ್ಪ 29: ಕನ್ನಡ ರಾಜ್ಯೋತ್ಸವ ನವೆಂಬರ್ 1ರಂದು ಸಡಗರ ಸಂಭ್ರಮದಿಂದ ಆಚರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕನ್ನಡಪರ ಸಂಘಟನೆಗಳು ಶಾಲಾ ಕಾಲೇಜು ಮಕ್ಕಳು ಶಿಕ್ಷಕರು ತಾಲ್ಲೂಕಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು ನಾಡು ನುಡಿ ಹಾಗೂ ಸಂಸ್ಕೃತಿ ಕಾರ್ಯಕ್ರಮ ಇದೇ ಮೈದಾನದಲ್ಲಿ ಹಮ್ಮಿಕೊಳ್ಳುವುದಾಗಿ ಶಾಸಕ ಎಂಎಸ್ ಸೋಮಲಿಂಗಪ್ಪ ಹೇಳಿದರು.
ಶುಕ್ರವಾರ ನಗರದ ತಾಲ್ಲೂಕಾ ಕ್ರೀಡಾ ಮೈದಾನದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕರ್ನಾಟಕ ಸರ್ಕಾರ ತಾಲ್ಲೂಕು ಆಡಳಿತ ತಾಲ್ಲೂಕು ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಭಾಗಿತ್ವದಲ್ಲಿ 67ನೇ ಕರ್ನಾಟಕ ರಾಜ್ಞೋತ್ಸವದ ಅಭಿಯಾನ ಹಿನ್ನೆಲೆಯಲ್ಲಿ ಕೋಟಿ ಕಂಠ ನನ್ನ ನಾಡು ನನ್ನ ಹಾಡು ಮಾತಾಡ್ ಮಾತಾಡ್ ಕನ್ನಡ ಗೀತೆಗಳ ಗಾಯನದಲ್ಲಿ ಅವರು ಭಾಗವಹಿಸಿ ಮಾತನಾಡುತ್ತಿದ್ದರು ತಹಸೀಲ್ದಾರ್ ಎನ್ ಆರ್ ಮಂಜುನಾಥ ಸ್ವಾಮಿ, ತಾಲ್ಲೂಕು ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ ಮಡಗಿನ ಬಸಪ್ಪ, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಈರಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಪಿಡಿ ಭಜಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಾದಿಲಿಂಗಪ್ಪ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ತಮ್ಮಣ್ಣಗೌಡ ಪಾಟೀಲ, ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಯಶವಂತ ಬಿಸನಳ್ಳಿ, ಜಿಲ್ಲಾ ಸಾಕ್ಷರತಾ ಕಾರ್ಯಕಾರಿ ಸಮಿತಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಜಾಗೃತಿ ಸಮಿತಿ ಕನ್ನಡ ಕಾವಲು ಸಮಿತಿ ಸದಸ್ಯರು, ಸಾಮಾಜಿಕ ಸುಧಾರಕ ಎ ಅಬ್ದುಲ್ ನಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಜಲಾಲಪ್ಪ, ಎಂಎಸ್ ವೆಂಕಟಪ್ಪ ನಾಯಕ, ಜಿಲ್ಲಾ ಬಿಜೆಪಿ ಪರಿಶಿಷ್ಟ ಜಾತಿ ಅಧ್ಯಕ್ಷ ಮೇಕೇಲಿ ವೀರೇಶ, ಸಹಾಯಕ ಕೃಷಿ ನಿರ್ದೇಶಕರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ನೀರಾವರಿ ಲೋಕೋಪಯೋಗಿ ಪಂಚಾಯತ್ ರಾಜ್ ಎಇಇ ತಾಲ್ಲೂಕ ಮಟ್ಟದ ಎಲ್ಲ ಅಧಿಕಾರಿಗಳು ಶಾಲಾ ಕಾಲೇಜು ಶಿಕ್ಷಕರು ಮಕ್ಕಳು ಸ್ಥಳೀಯ ಸಂಸ್ಥೆಗಳ ಎಲ್ಲ ಸರ್ವ ಸದಸ್ಯರು ಜನ ಪ್ರತಿನಿಧಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.