ಎಚ್.ಡಿ.ಕೆ. ಕ್ಷಮೆಯಾಚನೆಗೆ ಆರ್.ಅಶೋಕ್ ಒತ್ತಾಯ
ಬೆಂಗಳೂರು, ನ.19- ರೈತ ಮಹಿಳೆ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡಲೇ ಕ್ಷಮೆಯಾಚಿಸಬೇಕೆಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ಯಡಿಯೂರು ವಾಡರ್್ನಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿಮರ್ಿಸಲಾಗಿರುವ ಸೌರವಿದ್ಯುತ್ ಘಟಕ ಹಾಗೂ ಮಾಲಿಗಳ ವಸತಿ ಗೃಹಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರ ಮೇಲೆ ಗೂಂಡಾಗಿರಿ ಮಾಡುವುದು ಸರಿಯಾದ ಕ್ರಮವಲ್ಲ. ಅವರ ಜತೆ ಸೌಜನ್ಯದಿಂದ ಮಾತನಾಡಿ ಅವರ ಕಷ್ಟ, ಸುಖಗಳನ್ನು ಆಲಿಸುವುದು ಮುಖ್ಯಮಂತ್ರಿಗಳ ಕರ್ತವ್ಯ. ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡಿದರೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಸಿಎಂ ವರ್ತನೆ ನೋಡಿದರೆ ಸಕರ್ಾರ ಅಧಃಪತನಕ್ಕೆ ಮುನ್ಸೂಚನೆಯಾದಂತಿದೆ. ಈಗಲಾದರೂ ಮುಖ್ಯಮಂತ್ರಿಗಳು ಎಚ್ಚೆತ್ತುಕೊಂಡು ರೈತರ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಭವಿಷ್ಯದಲ್ಲಿ ತಕ್ಕ ಸಾಸ್ತಿ ಎದುರಿಸಬೇಕಾಗುತ್ತದೆ ಎಂದು ಗುಡುಗಿದರು.
ತಿಂಗಳಾಂತ್ಯದೊಳಗೆ ಯಡಿಯೂರು ಜೈವಿಕ ಅನಿಕ ಘಟಕದಲ್ಲಿ ಪ್ರತಿನಿತ್ಯ 250 ಕಿಲೋ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುವುದು. ಇದರಿಂದ 17 ಪಾಲಿಕೆಯ ಕಟ್ಟಡಗಳು, 13 ಉದ್ಯಾನವನಗಳು ಹಾಗೂ ಮೂರು ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಇರುವ ವಿದ್ಯುತ್ ದೀಪ ಹಾಗೂ ಅಲಂಕಾರಿಕ ದೀಪಗಳನ್ನು ಬೆಳಗಿಸುವುದರೊಂದಿಗೆ ಬೆಸ್ಕಾಂ ವಿದ್ಯುತ್ ಮುಕ್ತ ವಾಡರ್್ ಎಂಬ ಹಿರಿಮೆಗೆ ಪಾತ್ರವಾಗುವುದಲ್ಲದೆ, ಸ್ವಾಲಂಬಿ ನೈಸಗರ್ಿಕ ಮೂಲಗಳಿಂದ ವಿದ್ಯುತ್ ಉತ್ಪಾದಿಸುವ ಭಾರತದ ಪ್ರಪ್ರಥಮ ವಾಡರ್್ ಎಂಬ ಖ್ಯಾತಿಗೆ ಯಡಿಯೂರು ವಾಡರ್್ ಭಾಜವಾಗಲಿದೆ. ಈ ಯೋಜನೆಯು ಅನುಷ್ಠಾನಗೊಂಡ ನಂತರ ಪಾಲಿಕೆಯು ಪ್ರತಿ ತಿಂಗಳ ಪಾವತಿಸುತ್ತಿರವ 3.10ಲಕ್ಷ ರೂ.ನಷ್ಟು ವಿದ್ಯುತ್ ಶುಲ್ಕ ಸಂಪೂರ್ಣವಾಗಲಿದೆ ಎಂದರು.
ಮಾದರಿ ವಾಡರ್್:
ಯಡಿಯೂರು ವಾಡರ್್ನಲ್ಲಿ 15 ಲಕ್ಷ ಖಚರ್ು ಮಾಡಿ ಸೌರ ವಿದ್ಯುತ್ ಘಟಕ ಸ್ಥಾಪಿಸಲಾಗಿದೆ. ಇದರಿಂದ ಪ್ರತಿ ನಿತ್ಯ 15 ಕಿಲೋ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ವಾಡರ್್ನಲ್ಲಿರುವ ಪಾಲಿಕೆ ಕಟ್ಟಡಗಳು, ಉದ್ಯಾನವನ ಹಾಗೂ ಅಲಂಕಾರಿಕ ದೀಪಗಳ ನಿರ್ವಹಣೆಗೆ ಬಳಕೆ ಮಾಡಲಾಗುತ್ತದೆ. ಇದರಿಂದ ಪ್ರತಿ ತಿಂಗಳು ಬೆಸ್ಕಾಂಗೆ ಪಾವತಿಸಬೇಕಾದ 43 ಸಾವಿರ ರೂ. ಬಿಲ್ ಉಳಿತಾಯವಾಗಲಿದೆ. ಅದೇ ರೀತಿ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಘಟಕವನ್ನು ವಿಸ್ತರಿಸಿ 25 ಕಿಲೋ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುವುದು ಎಂದರು.
ಮೇಯರ್ ಗಂಗಾಂಬಿಕೆ ಮಾತನಾಡಿ, ಸೌರ ವಿದ್ಯುತ್ ಘಟಕ ಸ್ಥಾಪನೆಯಿಂದ ಬಹಳಷ್ಟು ವಿದ್ಯುತ್ ಉಳಿತಾಯವಾಗಲಿದೆ. ಈ ಕಾರ್ಯಕ್ಕೆ ಶ್ಲಾಘನೀಯ. ಇದೇ ರೀತಿ ಎಲ್ಲಾ ವಾಡರ್್ಗಳಲ್ಲೂ ಸೌರವಿದ್ಯುತ್ ಘಟಕ ಸ್ಥಾಪಿಸಿಕೊಳ್ಳಲು ಎಲ್ಲಾ ಸದಸ್ಯರಲ್ಲೂ ಮನವಿ ಮಾಡಲಾಗುವುದು. ಅದೇ ರೀತಿ ಮಾಲಿಗಳಿಗೆ ವಸತಿ ನಿಮರ್ಿಸಿಕೊಟ್ಟಿರುವುದು ಉತ್ತಮ ಕಾರ್ಯ. ಈ ಯೋಜನೆಯನ್ನೂ ಸಹ ಬೇರೆ ಬೇರೆ ಉದ್ಯಾನವನಗಳಲ್ಲಿ ನಿಮರ್ಾಣ ಮಾಡಿದರೆ ಸಮಸ್ಯೆ ನಿವಾರಣೆಯಾಗುತ್ತದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚಚರ್ಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಸ್ಥಳೀಯ ಪಾಲಿಕೆ ಸದಸ್ಯೆ ಪೂಣರ್ಿಮಾ ರಮೇಶ್, ಬಿಜೆಪಿ ವಕ್ತಾರ ಎನ್.ಆರ್.ರಮೇಶ್, ಬಿಬಿಎಂಪಿ(ದಕ್ಷಿಣ ವಲಯ) ಜಂಟಿ ಆಯುಕ್ತ ಡಾ.ಟಿ.ಎಚ್.ವಿಶ್ವನಾಥ್ ಸೇರಿದಂತೆ ಮತ್ತಿತರರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 