ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
ಲೋಕದರ್ಶನ ವರದಿ
ಮುಂಡಗೋಡ 30: ಶುಕ್ರವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು ತಾಲೂಕಿನ ಒಟ್ಟು 1324 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
648 ವಿದ್ಯಾರ್ಥಿಗಳು ಮತ್ತು 676 ವಿದ್ಯಾರ್ಥಿನಿಯರು ಸೇರಿ ಒಟ್ಟು 1324 ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಇದ್ದು ತಾಲೂಕಿನಲ್ಲಿ ಒಟ್ಟು 4 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 450 ವಿದ್ಯಾರ್ಥಿಗಳು, ರೋಟರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ 212, ಕರಗಿನಕೊಪ್ಪದ ಲೊಯೋಲ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ 327 ಹಾಗೂ ಕಾತೂರಿನ ಸರಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ 335 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಆಸನಗಳ ತಯಾರಿ ಮಾಡಲಾಗಿದೆ.