ರಾಜ್ಯ ಕೃಷಿ ಪರಿಕರ ಮಾರಾಟಗಾರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ತಿಮ್ಮನಗೌಡ ಆಯ್ಕೆ
ಲೋಕದರ್ಶನ ವರದಿ
ಬಳ್ಳಾರಿ, ಡಿ. 28: ರಾಜ್ಯ ಕೃಷಿ ಪರಿಕರ ಮಾರಾಟಗಾರರ ಸಂಘದ ಸಂಘಟನಾ ಕಾರ್ಯದರ್ಶಿ ಯಾಗಿ ವೆಂಕಟೇಶ್ವರ ಟ್ರೇಡಸರ್್ನ ಮಾಲೀಕರಾದ ಹೆಚ್.ತಿಮ್ಮನಗೌಡ ಅವರು ಆಯ್ಕೆಯಾಗಿದ್ದಾರೆ.
ಮೊನ್ನೆ ದಾವಣಗೆರೆಯಲ್ಲಿ ನಡೆದ ಕರ್ನಾಟಕ ರಾಜ್ಯದ ಪರಿಕರ ಮಾರಾಟಗಾರರ ಪ್ರತಿನಿಧಿಗಳ ಸಭೆಯಲ್ಲಿ ಕೃಷಿ ಪರಿಕರಗಳ ಮಾರಾಟ ಮತ್ತು ರೈತರ ಅಭಿವೃದ್ಧಿಯಲ್ಲಿ ಕೈಗೊಂಡ ಸೇವೆಗಳನ್ನು ಪರಿಗಣಿಸಿ ಇವರನ್ನು ಆಯ್ಕೆ ಮಾಡಲಾಯಿತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಿಮ್ಮನಗೌಡ ಅವರು ಸಂಘ ನನಗೆ ಈ ಜವಾಬ್ದಾರಿಯನ್ನು ನೀಡಿರುವುದಕ್ಕೆ ಸಂತೋಷವಾಗಿದೆ. ಇನ್ನು ಮುಂದೆ ರಾಜ್ಯಾದ್ಯಂತ ಪ್ರವಾಸ ಮಾಡಿ 35 ಸಾವಿರಕ್ಕೂ ಹೆಚ್ಚು ಕೃಷಿ ಪರಿಕರಗಳ ಮಾರಾಟಗಾರರನ್ನು ಭೇಟಿ ಮಾಡಿ ಈ ವ್ಯವಸ್ಥೆಯಲ್ಲಿರುವ ಸಮಸ್ಯೆಯ ನಿವಾರಣೆ ಮತ್ತು ರೈತರಿಗೆ ದೊರಕಿಸಿಕೊಡಬೇಕಾದ ಸೌಲಭ್ಯದ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಹೇಳಿದ್ದಾರೆ