ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ಬ್ಯಾಡಗಿ 20: ಪಟ್ಟಣದ ವೀರಮಾಹೇಶ್ವರ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಚಂದ್ರಶೇಖರಯ್ಯ ಆಲದಗೇರಿ ಹಾಗೂ ಉಪಾಧ್ಯಕ್ಷರಾಗಿ ಕೊಟ್ರಯ್ಯ ಸೊಪ್ಪಿನಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಇವರನ್ನು ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿಗಳು ಇಬ್ಬರನ್ನೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದ್ದಾರೆ.