ಬಡಜನರ ಕಲ್ಯಾಣವೇ ಸರ್ಕಾರದ ಗುರಿ
ಲೋಕದರ್ಶನ ವರದಿ
ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆ: ಜಿಲ್ಲಾ ಫಲಾನುಭವಿಗಳ ಸಮ್ಮೇಳನ, ಬೃಹತ್ ಪ್ರಮಾಣದಲ್ಲಿ ಭಾಗಿ
ಬಳ್ಳಾರಿ,ಮಾ.7: ಬಡ ಜನರ ಕಲ್ಯಾಣವೇ ಸರ್ಕಾರದ ಗುರಿಯಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ನೇರವಾಗಿ ತಲುಪುವಂತೆ ಮಾಡಲಾಗಿದೆ. ಇದು ಬಡಸಮರ್ಪಿತ ಸರ್ಕಾರವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದರು.
ನಗರದ ಡಾ.ರಾಜ್ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೊರೋನಾ ಮಹಾಮಾರಿ ಸಂದರ್ಭದಲ್ಲಿ ಸೋಂಕನ್ನು ಹಿಮ್ಮೆಟ್ಟಿಸುವಲ್ಲಿ ಕೋವಿಡ್ ಲಸಿಕೆಯನ್ನು ಕಂಡುಹಿಡಿಯಲಾಯಿತು. 230 ಕೋಟಿ ವ್ಯಾಕ್ಸಿನ್ ತಯಾರಿಸಿ ಕೇಂದ್ರ ಸಕರ್ಾರವು ದೇಶದಲ್ಲಿನ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಿದ್ದರಿಂದ ಕೋವಿಡ್ ಸಂಕಷ್ಟದಿಂದ ಹೊರಬಂದಿದೆ. ಇಂದು ನಾವೆಲ್ಲ ಮಾಸ್ಕ್ ಇಲ್ಲದಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಾಗವಹಿಸುವಂತಾಗಿದೆ. ಉಚಿತ ವ್ಯಾಕ್ಸಿನ್ ನೀಡಿದ್ದರಿಂದ ದೇಶ ಸಧೃಡವಾಗಿದೆ ಎಂದರು.
2017ರಲ್ಲಿ ದೇಶದಲ್ಲಿ 3 ಕೋಟಿ ಹೊಂದಿದ್ದ ನಳ ಸಂಪರ್ಕಗಳು, ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಿಂದ ದೇಶದ 11 ಕೋಟಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸಲಾಗಿದೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಪ್ರಧಾನಮಂತ್ರಿಗಳ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೊದಲ ಕಂತಿನ ಹಣವನ್ನು ಒಂದು ಬಟನ್ ಒತ್ತುವ ಮೂಲಕ 8 ಕೋಟಿ ಜನ ರೈತರ ಖಾತೆಗೆ ಏಕಕಾಲದಲ್ಲಿ ಹಣ ಜಮೆಯಾಗಿದೆ ಎಂದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 1ಕೋಟಿ 22 ಲಕ್ಷ ಮನೆಗಳ ನಿರ್ಮಾಣ ಮಾಡಲಾಗಿದೆ. ಪ್ರಧಾನಮಂತ್ರಿಗಳು 42 ಲಕ್ಷ ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಮಂಜೂರಾತಿಯನ್ನು ಮಾಡಲಾಗಿದೆ. ರಾಜ್ಯದಲ್ಲಿ 2,30,48,322 ರೂ. ಸಾಲ ಮಂಜೂರಾತಿ ಮಾಡಲಾಗಿದೆ ಎಂದು ತಿಳಿಸಿದರು.
ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಮಾತನಾಡಿ, ಜಿಲ್ಲೆಯಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸಕರ್ಾರದ ಯೋಜನೆಗಳನ್ನು ತಲುಪಿಸುವುದರ ಜೊತೆಗೆ ಸಕರ್ಾರದ ಯೋಜನೆಗಳನ್ನು ತಿಳಿಸುವ ಕೆಲಸ ಮಾಡಲಾಗುತ್ತಿದೆ.
*25,54,125 ಫಲಾನುಭವಿಗಳು, 1649.73 ಕೋಟಿ ಅನುದಾನ:* ಜಿಲ್ಲೆಯಲ್ಲಿ 25,54,125 ಲಕ್ಷ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸೌಲಭ್ಯ ಸಿಕ್ಕಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ 1649.73 ಕೋಟಿ ರೂ. ಅನುದಾನ ಒದಗಿಸಿದೆ ಎಂದು ತಿಳಿಸಿದರು.
ಮೀಸಲಾತಿ ಹೆಚ್ಚಳದಲ್ಲಿ ನಮ್ಮ ಸರ್ಕಾರವು ದಿಟ್ಟ ನಿರ್ಧಾರ ಕೈಗೊಂಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಿಸಿ ಆದೇಶ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಅವಶ್ಯಕವಾಗಿರುವ ಅನೇಕ ಯೋಜನೆಗಳನ್ನು ಜಾರಿಗೊಳಿಸಿ, ಪರಿಶಿಷ್ಟ ಜಾತಿಗೆ ಶೇ.15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.3 ರಿಂದ 7ಕ್ಕೆ ಮೀಸಲಾತಿ ಹೆಚ್ಚಿಸಿದ್ದಾರೆ ಎಂದರು.
ರಾಜ್ಯದ ಜನರು ಶಸಕ್ತವಾಗುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸಕರ್ಾರವು ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಒಟ್ಟು 10 ಸಾವಿರ ರೂ.ಗಳನ್ನು ವರ್ಷಕ್ಕೆ ಮೂರು ಕಂತುಗಳಲ್ಲಿ ರೈತರಿಗೆ ಕೊಡಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರ ರೂಪಿಸಿದ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವ ಸದುದ್ದೇಶವನ್ನು ಜಿಲ್ಲಾಡಳಿತ ಹಾಗೂ ಅಧಿಕಾರಿ ವರ್ಗವೂ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಅಭಿನಂದಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸಕರ್ಾರದ ಯೋಜನೆಗಳು ಯಾವುದೇ ಮಧ್ಯಂತರ ವ್ಯಕ್ತಿಗಳಿಲ್ಲದೇ ಪ್ರತಿಯೊಬ್ಬ ವ್ಯಕ್ತಿಗೂ ತಲುಪಿಸುವುದೇ ಸರ್ಕಾರದ ಮೂಲ ಉದ್ದೇಶವಾಗಿದೆ ಎಂದರು.
ರಾಜ್ಯ ಮತ್ತು ಕೇಂದ್ರ ಸಕರ್ಾರವು ಹಲವಾರು ಯೋಜನೆಗಳನ್ನು ಜಾರಿತಂದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ದೇಶದಲ್ಲಿನ ಪ್ರತಿಯೊಬ್ಬ ಮಹಿಳೆಗೆ ಹೊಗೆ ಮುಕ್ತ ಮಾಡಲು ಉಜ್ವಲ ಯೋಜನೆಯಡಿ 9 ಕೋಟಿ ಮನೆಗಳಿಗೆ ಗ್ಯಾಸ್ ಅಡುಗೆ ಅನಿಲಗಳನ್ನು ವಿತರಿಸಲಾಗಿದೆ. ಅದೇರೀತಿಯಾಗಿ ರಾಜ್ಯ ಸಕರ್ಾರವು ಮಾತೃ ವಂದನಾ ಯೋಜನೆ, ಸ್ತ್ರೀಶಕ್ತಿ ಯೋಜನೆ ಹಾಗೂ ದುಡಿಯುವ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಲು ಬಜೆಟ್ನಲ್ಲಿ ಘೋಷಿಸಿದ್ದಾರೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಕೆಲವೇ ಗಂಟೆಗಳಲ್ಲಿ ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದರು. ರಾಜ್ಯ 22 ಲಕ್ಷ ವಿದ್ಯಾಥರ್ಿಗಳು ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ರಾಜ್ಯ ಸರ್ಕಾರವು ನಗರೋತ್ಥಾನ ಯೋಜನೆಯಡಿ ರೂ.125 ಕೋಟಿಯಲ್ಲಿ ನಗರವು ಅಭಿವೃದ್ಧಿ ಹೊಂದುತ್ತಿದೆ.
ಮುಂಡರಗಿ ಆಶ್ರಯ ಯೋಜನೆಯಡಿ 5,616 ಮನೆಗಳನ್ನು ಕಟ್ಟಲು ಅನುಮತಿ ಪಡೆದುಕೊಂಡಿದ್ದು, ಅದರಲ್ಲಿ ಈಗಾಗಲೇ 1,500 ಮನೆಗಳನ್ನು ಪೂರ್ಣಗೊಳಿಸಲಾಗಿದೆ.
ಉಳಿದ ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸಿ ಎಲ್ಲರಿಗೂ ಸೂರನ್ನು ಕಲ್ಪಿಸಲಾಗುವುದು ಎಂದರು.
ಪ್ರಧಾನ ಮಂತ್ರಿ ಯೋಜನೆಯಡಿ ಸ್ಲಂಬೋಡರ್್ನಿಂದ 2,300 ಮನೆಗಳು ಮಂಜೂರಾಗಿದ್ದು, 1000 ಮನೆಗಳು ಪೂರ್ಣಗೊಂಡಿವೆ. ನಗರದಲ್ಲಿ 13,000 ಪಟ್ಟಾಗಳನ್ನು ವಿತರಣೆ ಮಾಡಲಾಗುತ್ತಿದ್ದು, ಎಲ್ಲಾ ಮನೆಗಳಿಗೂ ಪಟ್ಟಾ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ನಗರದಲ್ಲಿನ ಸಕರ್ಾರಿ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಗದಲ್ಲಿ ವಾಸ ಮಾಡುತ್ತಿರುವ ನಿವಾಸಿಗಳಿಗೆ ಮತ್ತು ನಗರದಲ್ಲಿನ 55 ಕೊಳಚೆ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ನಿವಾಸಿಗಳಿಗೆ ಪಟ್ಟಾ ವಿತರಣೆ ಮಾಡಲಾಗುವುದು ಎಂದರು.
ನಗರದಲ್ಲಿ ಅನಂತಪುರ ರೋಡ್ ರಸ್ತೆ ಅಗಲೀಕರಣ ಪ್ರಾರಂಭವಾಗಿದೆ. ಪ್ರತಿಯೊಂದು ರಸ್ತೆಯಲ್ಲಿ ರೂ.33 ಕೋಟಿ ವೆಚ್ಚದಲ್ಲಿ ವಿದ್ಯುತ್ಕಂಬಗಳನ್ನು ಆಳವಡಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಭಾಗಿಯಾಗಲು ಜಿಲ್ಲೆಯ 5 ತಾಲೂಕಿನ ವಿವಿಧೆಡೆ ಸೇರಿದಂತೆ ನಗರ ಮತ್ತು ಗ್ರಾಮೀಣ ಭಾಗದ ಬೃಹತ್ ಪ್ರಮಾಣದ ಹೆಚ್ಚು ಜನ ಫಲಾನುಭವಿಗಳು ಆಗಮಿಸಿದ್ದರು. ಫಲಾನುಭವಿಗಳಿಗೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾರಿಗೆ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆ, ಊಟದ ವ್ಯವಸ್ಥೆ, ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಸಂಸದರಾದ ವೈ.ದೇವೇಂದ್ರಪ್ಪ, ಎಂಎಲ್ಸಿ ವೈ.ಎಂ.ಸತೀಶ್, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರುಪಾಕ್ಷಗೌಡ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸರ್ವಶೆಟ್ಟಿ ಮಾರುತಿ ಪ್ರಸಾದ್, ಎಪಿಎಂಸಿ ಅಧ್ಯಕ್ಷ ಬಸವಲಿಂಗಪ್ಪ, ಮಾಜಿ ಸಂಸದೆ ಜೆ.ಶಾಂತಾ, ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಫಲಾನುಭವಿಗಳು ಮತ್ತಿತರರು ಉಪಸ್ಥಿತರಿದ್ದರು.