ಕುಷ್ಟಗಿ

ಯುವ ಪೀಳಿಗೆ ದುಶ್ಚಟಗಳಿಗೆ ದಾಸರಾಗುತ್ತಿರುವುದು ವಿಷಾದನೀಯ: ಸುರೇಂದ್ರ ಕಾಂಬಳೆ

ಯುವ ಪೀಳಿಗೆ ದುಶ್ಚಟಗಳಿಗೆ ದಾಸರಾಗುತ್ತಿರುವುದು ವಿಷಾದನೀಯ: ಸುರೇಂದ್ರ ಕಾಂಬಳೆ

ಲೋಕದರ್ಶನ ವರದಿ 

ಕುಷ್ಟಗಿ 28 : ಇಂದಿನ ಯುವ ಪೀಳಿಗೆ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಬೇಸರ ವ್ಯಕ್ತಪಡಿಸಿದರು. 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಕುಷ್ಟಗಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಬೆಳಗ್ಗೆ ತಾಲೂಕಿನ ಕುರುಬನಾಳ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 2022-23 ವಾಷರ್ಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು .ಶಿಕ್ಷಣವೇ ಶಕ್ತಿ ಪ್ರತಿಯೊಬ್ಬ ವ್ಯಕ್ತಿಯೂ ಶಿಕ್ಷಣ ಪಡೆಯಬೇಕು. 

ಮಕ್ಕಳು ವಿದ್ಯಾಭ್ಯಾಸ ಪಡೆಯಲು ಸರಕಾರ  ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. 

ಕುರುಬನಾಳ ಗ್ರಾಮದ ಹನುಮಂತಪ್ಪ ಸಾಹುಕಾರ ಶಿಬಿರದ ಅಧ್ಯಕ್ಷತೆವಹಿಸಿದ್ದರು. 

ಎಸ್ಡಿಎಂಸಿ ಅಧ್ಯಕ್ಷ ಭೀಮಪ್ಪ ಪವಾಡಪ್ಪನವರ್ ಮತ್ತು ಶರಣಪ್ಪ ತಳವಾರ್, ಶಿಕ್ಷಕ ಕಾಂತನಗೌಡ ಹಾಗೂ ಎನ್.ಎಸ್.ಎಸ್ ಸ್ವಯಂ ಸೇವಕ ಭೋಗೇಶ್ ರಾವ್, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ರಮೇಶ ಚೌಹಾಣ್ ಮತ್ತು ಶಿಕ್ಷಕ ಶಿವಪ್ಪ ವಾಗ್ಮೋರಿ ಹಾಗೂ ಶಿಕ್ಷಕ ವೃಂದ ಮತ್ತು ಕುರುಬನಾಳ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.  

ನಂತರ ಎನ್ಎಸ್ಎಸ್ ಶಿಬಿರಾರ್ಥಿಗಳಿಂದ ಗ್ರಾಮದಲ್ಲಿ ಮತದಾನ ಕುರಿತು ಜಾಗೃತಿ ಜಾತಾ ಹಾಗೂ ಗ್ರಾಮ ಸ್ವಚ್ಛತೆ ಮಾಡಲಾಯಿತು .

ಸುದ್ದಿ ಓದಿ