ಮಹಾಲಿಂಗಪುರದಲ್ಲಿ ‘ಐಸಿರಿ’ ನೇತ್ರ ಚಿಕಿತ್ಸಾಲಯ ಉದ್ಘಾಟನೆ
‘Aisiri’ Eye Clinic inaugurated in Mahalingapura
ಲೋಕದರ್ಶನ ವರದಿ
ಮಹಾಲಿಂಗಪುರ 25: ಶರೀರದ ಎಲ್ಲ ಅವಯವಗಳಲ್ಲಿ ಕಣ್ಣಿಗೆ ಅತ್ಯಂತ ಹೆಚ್ಚಿನ ಪ್ರಾಶಸ್ತ್ಯವಿದ್ದು, ಅದರ ಆರೋಗ್ಯವನ್ನು ಕಾಪಾಡಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು. ಪಟ್ಟಣದ ವೆಂಕಟೇಶ (ಕನಕರೆಡ್ಡಿ) ಆಸ್ಪತ್ರೆ ಆವರಣದಲ್ಲಿ ಗುರುವಾರ ನಡೆದ ‘ಐಸಿರಿ’ ನೇತ್ರ ಚಿಕಿತ್ಸಾಲಯದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
“ಶರೀರದ ಇತರ ಅವಯವಗಳಲ್ಲಿ ಏನಾದರೂ ತೊಂದರೆಯಾದರೆ ಅದನ್ನು ಸರಿಪಡಿಸಿಕೊಳ್ಳಬಹುದು. ಆದರೆ ಕಣ್ಣಿನ ದೃಷ್ಟಿ ಕಳೆದುಕೊಂಡರೆ ಇಡೀ ಜೀವನವೇ ಅಂಧಕಾರಮಯವಾಗುತ್ತದೆ. ಆದ್ದರಿಂದ ಕಣ್ಣಿನ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕಣ್ಣಿನ ತೊಂದರೆಗಳಿಂದ ಬಳಲುವವರಿಗೆ ಚಿಕಿತ್ಸೆ ನೀಡಿ ಹೊಸ ಬೆಳಕನ್ನು ನೀಡುವ ವೈದ್ಯರ ಸೇವೆ ಅತ್ಯಂತ ಶ್ರೇಷ್ಠವಾದುದು” ಎಂದು ಅವರು ಹೇಳಿದರು.
ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಮಾತನಾಡಿ, ಈವರೆಗೆ ನೇತ್ರ ಚಿಕಿತ್ಸೆಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳಿಗಾಗಿ ಸ್ಥಳೀಯರು ದೊಡ್ಡ ನಗರಗಳಿಗೆ ತೆರಳಬೇಕಾಗುತ್ತಿತ್ತು. ಈಗ ಮಹಾಲಿಂಗಪುರದಲ್ಲೇ ಆಧುನಿಕ ಸೌಲಭ್ಯಗಳೊಂದಿಗೆ ನೇತ್ರ ಚಿಕಿತ್ಸಾ ಕೇಂದ್ರ ಆರಂಭಗೊಂಡಿರುವುದು ಜನತೆಗೆ ಅನುಕೂಲಕರವಾಗಿದೆ. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ನಿಶಾಂತ ಮಹಾಸ್ವಾಮಿಗಳು ಆಶೀರ್ವಚನ ನೀಡಿ, “ದೇವರು ನೀಡಿರುವ ಪ್ರತಿಯೊಂದು ಅಂಗವೂ ಅಮೂಲ್ಯ. ಅವುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿ. ಕಣ್ಣು ಎಂಬ ಜ್ಯೋತಿಯಿಂದಲೇ ನಾವು ಪ್ರಪಂಚದ ಸೌಂದರ್ಯವನ್ನು ಕಾಣುತ್ತೇವೆ. ಕಣ್ಣಿನ ದೃಷ್ಟಿಯನ್ನು ಮರಳಿ ನೀಡುವ ವೈದ್ಯರ ಸೇವೆ ಸಮಾಜಕ್ಕೆ ಅಮೂಲ್ಯ ಕೊಡುಗೆಯಾಗಿದೆ” ಎಂದು ಹೇಳಿದರು.
ವೆಂಕಟೇಶ ಆಸ್ಪತ್ರೆಯ ಚೇರ್ಮನ್ ಡಾ. ಅಜೀತ್ ಕನಕರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, “ನಮ್ಮ ಪಾಲಕರ ಕನಸಿನಂತೆ ಆರೋಗ್ಯ ಸೇವೆಯ ಎಲ್ಲ ವಿಭಾಗಗಳನ್ನು ಮಹಾಲಿಂಗಪುರದಲ್ಲೇ ಲಭ್ಯವಾಗಿಸುವ ಉದ್ದೇಶದಿಂದ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಸ್ಥಳೀಯರಿಗೆ ದೂರದ ನಗರಗಳಿಗೆ ತೆರಳಿ ಚಿಕಿತ್ಸೆ ಪಡೆಯುವ ಅನಿವಾರ್ಯತೆಯನ್ನು ತಪ್ಪಿಸಲು ‘ಐಸಿರಿ’ ನೇತ್ರ ಚಿಕಿತ್ಸಾ ವಿಭಾಗವನ್ನು ಆರಂಭಿಸಲಾಗಿದೆ” ಎಂದು ತಿಳಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 