‘ಕೇಂದ್ರ, ರಾಜ್ಯ ಸರ್ಕಾರಗಳು ಆವರ್ತನಿಧಿ ಸ್ಥಾಪಿಸಲಿ’
‘Central and state governments should establish a rotation schedule’
ದಾವಣಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಅನುಕೂಲಕ್ಕಾಗಿ ಆವರ್ತನಿಧಿ ಸ್ಥಾಪನೆ ಮಾಡಬೇಕು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. ಅವರು ಶನಿವಾರ (ಜ.17) ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಎರಡು ಲಕ್ಷ ಕೋಟಿ ಅನುದಾನ ಇಟ್ಟು ಆವರ್ತನಿಧಿ ಸ್ಥಾಪಿಸಿದರೆ, ರಾಜ್ಯ ಸರ್ಕಾರ 10,000 ಕೋಟಿ ಅನುದಾನ ಆವರ್ತನಿಧಿಗಾಗಿ ಇಡಬೇಕು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆವರ್ತ ನಿಧಿ ಇಟ್ಟು ಕೃಷಿ ಉತ್ಪನಗಳನ್ನು ಬೆಂಬಲ ಬೆಲೆಯಡಿ ಖರೀದಿಸಲು ವರ್ಷವಿಡೀ ಖರೀದಿ ಕೇಂದ್ರಗಳನ್ನು ತೆರೆಯಬೇಕು. ರೈತರು ತಮ್ಮ ಬೆಳೆಗಳನ್ನು ತಮಗೆ ಬೇಕಾದಾಗ ಬೆಂಬಲ ಬೆಲೆಯಡಿ ಮಾರಾಟ ಮಾಡಿ ಅನುಕೂಲ ಮಾಡಿಕೊಳ್ಳುತ್ತಾರೆ ಎಂದರು.
ಮಾರುಕಟ್ಟೆಯಲ್ಲಿ ರೈತರ ಉತ್ಪನ್ನ ಖಾಲಿಯಾದ ಮೇಲೆ ಖರೀದಿ ಕೇಂದ್ರಗಳನ್ನು ತೆರೆದು ವ್ಯಾಪಾರಸ್ಥರಿಗೆ ಲಾಭ ಮಾಡಿಕೊಡುವ ಸರ್ಕಾರದ ನೀತಿಯಿಂದ ರೈತರಿಗೆ ಆಗುವ ಆರ್ಥಿಕ ನಷ್ಟ ಆವರ್ತನಿಧಿ ಸ್ಥಾಪನೆಯಿಂದ ತಡೆಯಬಹುದು ಎಂದರು.
ಕೃಷಿ ಸಾಲ ನೀಡಲು ಬ್ಯಾಂಕ್ಗಳಲ್ಲಿ ಸಿಬಿಲ್ ಸ್ಕೋರ್ ಅನ್ವಯಿಸಬಾರದು. ರೈತರ ಕೃಷಿ ಸಾಲವನ್ನು ಸಿಬಿಲ್ ಸ್ಕೋರ್ನಿಂದ ಸಂಪೂರ್ಣವಾಗಿ ಹೊರಗಿಡಬೇಕು. ಈ ವ್ಯವಸ್ಥೆ ಇಡೀ ದೇಶದಲ್ಲಿಯೇ ಆಗಬೇಕು. ದೇಶಕ್ಕೆ ಅನ್ನ ನೀಡುವ ರೈತರಿಗೆ ಅಗತ್ಯಕ್ಕೆ ತಕ್ಕಷ್ಟುಸಾಲ ನೀಡುವಂತಾಗಬೇಕು ಎಂದರು.
ರಾಜ್ಯದಲ್ಲಿ ಬೆಳೆದಿರುವ ಮೆಕ್ಕೆಜೋಳ ಸರಾಸರಿ ಇಳುವರಿ ಆಧಾರದಲ್ಲಿ ಈಗಾಗಲೇ ಮಾರಾಟ ಮಾಡಿದ ರೈತರಿಗೂ ಬೆಂಬಲ ಬೆಲೆ ವ್ಯತ್ಯಾಸದ ಹಣ ಕೊಡುವ ವ್ಯವಸ್ಥೆಯಾಗಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 