ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಸುಗಮ ಸಂಗೀತ ಕಲಾ ತರಬೇತಿ’ ಕಾರ್ಯಕ್ರಮಕ್ಕೆ ಚಾಲನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಸುಗಮ ಸಂಗೀತ ಕಲಾ ತರಬೇತಿ’ ಕಾರ್ಯಕ್ರಮಕ್ಕೆ ಚಾಲನೆ  ‘Sugama Sangeetha’ training programme launched by the Department of Kannada and Culture

ಲೋಕದರ್ಶನ ವರದಿ  

ಬಳ್ಳಾರಿ 02: ತಂದೆ, ತಾಯಿ ಹಾಗೂ ಗುರುಗಳು ನೀಡುವ ಶಿಕ್ಷಣ ಮತ್ತು ಸಂಸ್ಕಾರವೇ ಜೀವನದ ಅಮೂಲ್ಯ ಸಂಪತ್ತು ಎಂದು ತಾಷೆ ರಾಮಡೋಲ್ ವಿದ್ವಾಂಸ ಶಿಕಾರಿ ರಾಮು ಹೇಳಿದರು.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಂಪ್ಪ್ಲಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಆಯೋಜಿಸಿದ್ದ ‘ಸುಗಮ ಸಂಗೀತ ಕಲಾ ತರಬೇತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ವಿದ್ಯಾರ್ಥಿಗಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಬೆಳೆಸಲು ಇಂತಹ ತರಬೇತಿ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.  

ವಸತಿ ನಿಲಯದ ಪಾಲಕ ವಿರೂಪಾಕ್ಷ ಮಾತನಾಡಿ, ವಿದ್ಯಾರ್ಥಿಗಳು ದೊರೆಯುವ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ವೈಯಕ್ತಿಕ ಬೆಳವಣಿಗೆಯೊಂದಿಗೆ ಶಾಲೆ ಮತ್ತು ಕುಟುಂಬಕ್ಕೂ ಕೀರ್ತಿ ತಂದುಕೊಡಬಹುದು ಎಂದು ಹೇಳಿದರು.  

ಶೈಲಾ ದೇವರಮನಿ ಮಾತನಾಡಿ, ಆರು ತಿಂಗಳ ಕಾಲ ನಡೆಯಲಿರುವ ಈ ತರಬೇತಿ ವಿದ್ಯಾರ್ಥಿಗಳಿಗೆ ಸಂಗೀತ ಕಲಿಕೆಗೆ ಉತ್ತಮ ಅವಕಾಶವಾಗಿದೆ ಎಂದು ತಿಳಿಸಿದರು.  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು.  ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.