‘ಯೋಗ ಆಂತರಿಕ ಶಾಂತಿಯನ್ನು ಅನುಭವಿಸುವ ಒಂದು ಜೀವನ ಪದ್ಧತಿ’
‘Yoga is a way of life to experience inner peace’
ಲೋಕದರ್ಶನ ವರದಿ
ಜಮಖಂಡಿ ೨೩: ಯೋಗವು ದೇಹ, ಮನಸ್ಸು ಮತ್ತು ಆತ್ಮವನ್ನು ಸಮನ್ವಯಗೊಳಿಸಿ ಆರೋಗ್ಯ ಕಾಪಾಡಿಕೊಳ್ಳುವ ಮತ್ತು ಆಂತರಿಕ ಶಾಂತಿಯನ್ನು ಅನುಭವಿಸುವ ಒಂದು ಜೀವನ ಪದ್ಧತಿಯಾಗಿದೆ ಎಂದು ಯೋಗಗುರು ನಿವೃತ್ತ ಪ್ರಾಧ್ಯಾಪಕ ಎ.ಎಸ್. ಕಂದಗಲ ಹೇಳಿದರು.
ನಗರದ ಬಸವಜ್ಯೋತಿ ಶಿಕ್ಷಣ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ೧೨ನೇ ವಿಶ್ವಯೋಗ ದಿನಾಚರಣೆಯಲ್ಲಿ ಯೋಗಾಸನಗಳ ಪ್ರಾತ್ಯಕ್ಷಿಕೆ ನೀಡಿ ಅದರ ಮಹತ್ವ ಕುರಿತು ಮಾತನಾಡಿದ ಅವರು, ಸೂರ್ಯ ನಮಸ್ಕಾರ ಮಾಡುವುದರಿಂದ ರಕ್ತಸಂಚಲನ ಸುಧಾರಿಸುತ್ತದೆ, ದೇಹದ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ ಎಂದರು.
ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ಮಾತನಾಡಿ, ಮನಸ್ಸಿನ ಏಕಾಗ್ರತೆ ಸಾಧಿಸಲು ಮತ್ತು ಸ್ಮರಣಶಕ್ತಿಯನ್ನು ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳು ದಿನನಿತ್ಯ ಯೋಗ ಮಾಡಬೇಕು ಎಂದರು.
ಬಸವಜ್ಯೋತಿ ಶಿಕ್ಷಣ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಡಾ.ಗಿರೀಶ ಕಡ್ಡಿ, ಮುಖ್ಯ ಶಿಕ್ಷಕ ಪಿ.ಐ.
ಹೊಸಮಠ ಇದ್ದರು. ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ದಿನಾಚರಣೆಯ ಯಶಸ್ಸಿಗೆ ಶ್ರಮಿಸಿದರು.
ಸಂಭ್ರಮ ಹಾಗೂ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ೫ನೇ ತರಗತಿ ಮಕ್ಕಳು ಸಾಮೂಹಿಕ ಯೋಗ ಪ್ರದರ್ಶನ ನೀಡಿದರು. ವಿಮಲಾ ಚೌಧರಿ, ಆರಾಧ್ಯ ಬಳ್ಳೂರಗಿ ನಿರೂಪಿಸಿದರು. ಶ್ರೀದೇವಿ ಬಡಿಗೇರ ವಂದಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 