ಯುದ್ದದಂತಹ ತುರ್ತು ಸಂದರ್ಭದಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೇಂದ್ರ ಗೃಹಸಚಿವಾಲಯದ ನಿರ್ದೇಶನದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ನಡೆದ “ಆಪರೇಷನ್ ಅಭ್ಯಾಸ್” ಅಣಕು ಪ್ರದರ್ಶನ ಕಾರ್ಯಕ್ರಮದ ಸಂದರ್ಭದಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ಕಾರ್ಯವಿಧಾನವನ್ನು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ವೀಕ್ಷಿಸಿ, ಸಿಬ್ಬಂದಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಇದ್ದರು.